ಲೋಕಸಭೆ ಚುನಾವಣೆಯಲ್ಲಿ ಸೋತವರಿಗೆ ರಾಜ್ಯಸಭೆ ಸ್ಪರ್ಧೆಗೆ ತಡೆ ನೀಡುವಂತೆ ಕೋರಿದ್ದ ಅರ್ಜಿ ವಜಾ

ಈ ಸುದ್ದಿಯನ್ನು ಶೇರ್ ಮಾಡಿ

Delhi-High-Court

ನವದೆಹಲಿ, ಮೇ 21-ಲೋಕಸಭೆ ಚುನಾವಣೆಗಳಲ್ಲಿ ಪರಾಭವಗೊಂಡವರು ರಾಜ್ಯಸಭೆಗೆ ಸ್ಫರ್ಧಿಸಲು ಅವಕಾಶ ನೀಡಬಾರದೆಂದು ಕೋರಿ ಸಲ್ಲಿಸಲಾದ ಅರ್ಜಿಯೊಂದನ್ನು ಪುರಸ್ಕರಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ.   ಸಾಮಾಜಿಕ ಕಾರ್ಯಕರ್ತ ಸತ್ಯ ನಾರಾಯಣ ಪ್ರಸಾದ್ ಎಂಬುವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಯಾವ ಕ್ರಮ ಕೈಗೊಳ್ಳಲಾಗಿದೆ ಎಂದು ಕೋರಿ ಮಾಹಿತಿ ಹಕ್ಕು (ಆರ್‍ಟಿಐ) ಕಾಯ್ದೆ ಅಡಿ ಕಾನೂನು ಸಚಿವಾಲಯ ಮತ್ತು ಚುನಾವಣಾ ಆಯೋಗಕ್ಕೆ ಪುನರಾವರ್ತಿತ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅರ್ಜಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದರು. ಲೋಕಸಭೆ ಚುನಾವಣೆಗಳಲ್ಲಿ ಸೋತವರಿಗೆ ರಾಜ್ಯಸಭೆಗೆ ಸ್ಫರ್ಧಿಸಲು ಅವಕಾಶ ನೀಡಬಾರದೆಂದೂ ಅವರು ಕೋರಿದ್ದರು.ಈ ಅರ್ಜಿಯ ವಿಚಾರಣೆ ನಡೆಸಿದ ಉಸ್ತುವಾರಿ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಮತ್ತು ನ್ಯಾಯಮೂರ್ತಿ ಸಿ. ಹರಿಶಂಕರ್ ಅವರನ್ನು ಒಳಗೊಂಡ ಪೀಠವು, ಅರ್ಜಿದಾರರಿಗೆ ಒಂದು ಪರ್ಯಾಯವಾದ, ಸಮಾನ ಪರಿಣಾಮ ಪರಿಹಾರೋಪಾಯ ಲಭ್ಯವಿದೆ. ಆದರೆ ಅವರು ಈ ಮಾರ್ಗೋಪಾಯಗಳನ್ನು ಕಂಡುಕೊಂಡಿಲ್ಲ. ಹೀಗಾಗಿ ಅರ್ಜಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಆರ್‍ಟಿಐ ಕಾಯ್ದೆ ಅಡಿ ಅರ್ಜಿದಾರರಿಗೆ ಲಭ್ಯವಿರುವ ಸೂಕ್ತ ಪರಿಹಾರೋಪಾಯಗಳನ್ನು ಬಳಸಿಕೊಳ್ಳಲು ನ್ಯಾಯಾಲಯವು ಮುಕ್ತ ಅವಕಾಶ ನೀಡುವ ಮೂಲಕ ಅವರ ಅರ್ಜಿಯನ್ನು ತಿರಸ್ಕರಿಸಿದೆ ಎಂದು ಪೀಠ ಸ್ಪಷ್ಟಪಡಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin