ನಾಯಿ ದಾಳಿಗೆ ಸಿಲುಕಿದ ಜಿಂಕೆಯನ್ನು ರಕ್ಷಿಸಿದ ಗ್ರಾಮಸ್ಥರು

ಈ ಸುದ್ದಿಯನ್ನು ಶೇರ್ ಮಾಡಿ

Deer

ಕೋಲಾರ, ಮೇ 22-ನಾಯಿಗಳ ದಾಳಿಗೆ ಸಿಲುಕಿದ ಜಿಂಕೆಯೊಂದನ್ನು ಶ್ರೀನಿವಾಸಪುರ ತಾಲೂಕಿನ ಚಾಂಪಲ್ಲಿ ಗ್ರಾಮಸ್ಥರು ರಕ್ಷಿಸಿ ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ್ದಾರೆ. ಮೇವು-ನೀರು ಅರಸಿ ಗ್ರಾಮದ ಕಡೆ ಬಂದ ಜಿಂಕೆಯ ಮೇಲೆ ಏಕಾಏಕಿ ನಾಯಿಗಳು ದಾಳಿ ನಡೆಸಲು ಮುಂದಾಗಿದ್ದವು. ಇದನ್ನು ಕಂಡ ಗ್ರಾಮಸ್ಥರು ನಾಯಿಗಳಿಂದ ಜಿಂಕೆಯನ್ನು ರಕ್ಷಿಸಿದ್ದಾರೆ.



ನಾಯಿಗಳ ದಾಳಿಯಿಂದ ಗಾಯಗೊಂಡ ಜಿಂಕೆಗೆ ಚಿಕಿತ್ಸೆ ನೀಡಲು ಸ್ಥಳೀಯ ಪಶು ಆಸ್ಪತ್ರೆಗೆ ಕರೆ ಮಾಡಿ ವೈದ್ಯರನ್ನು ಬರಲು ತಿಳಿಸಿದರೂ ಸ್ಥಳಕ್ಕೆ ಬಾರದ ವೈದ್ಯರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು ಜಿಂಕೆಯನ್ನು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin