ವಿಶ್ವ ಹಿರಿಯರ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ತುಮಕೂರಿನ ಟಿ.ಕೆ.ಆನಂದ್‍ಗೆ ಚಿನ್ನದ ಪದಕ

ಈ ಸುದ್ದಿಯನ್ನು ಶೇರ್ ಮಾಡಿ

Tumakuru--001

ತುಮಕೂರು, ಮೇ 22-ಸಿಂಗಾಪುರದಲ್ಲಿ ಕಳೆದ 14ರಂದು ನಡೆದ 38ನೇ ವಿಶ್ವ ಹಿರಿಯರ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದ ತುಮಕೂರಿನ 69 ವರ್ಷದ ಹಿರಿಯ ಕ್ರೀಡಾಪಟು ಟಿ.ಕೆ.ಆನಂದ್ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗಳಿಸಿದ್ದಾರೆ.  1948ರಲ್ಲಿ ಜನಿಸಿದ ಟಿ.ಕೆ.ಆನಂದ್ 1963ರಲ್ಲಿ ಕ್ರೀಡಾಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿದವರು.ಮೈಸೂರು ವಿವಿ ಅಥ್ಲೇಟ್ ಕ್ರೀಡಾಪಟುವಾಗಿ ಹೊರಹೊಮ್ಮಿದ್ದರು.1995ರಲ್ಲಿ ಹಿರಿಯರ ಕ್ರೀಡಾಕೂಟಕ್ಕೆ ಸೇರ್ಪಡೆಯಾದ ಇವರು, ಇದುವರೆಗೂ 15ಕ್ಕೂ ಹೆಚ್ಚು ಹಿರಿಯರ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಬಹುಮಾನ ಪಡೆದು ದೇಶಕ್ಕೆ ಕೀರ್ತಿ ತಂದಿದ್ದಾರೆ.



1995ರಲ್ಲಿ ಕುರುಕ್ಷೇತ್ರದಲ್ಲಿ ನಡೆದ ರಾಷ್ಟ್ರೀಯ ಹಿರಿಯರ ಕ್ರೀಡಾಕೂಟದಲ್ಲಿ ಬೆಳ್ಳಿಪದಕ,1996ರಲ್ಲಿ ಕಾನ್ಪುರದಲ್ಲಿ ನಡೆದ ಪಂದ್ಯಾವಳಿಯಲ್ಲಿ ಬೆಳ್ಳಿ ಪದಕ,1997ರಲ್ಲಿ ಮಲ್ಲೇಷಿಯಾದಲ್ಲಿ ನಡೆದ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ,2000ರಲ್ಲಿ ಭಾರತದಲ್ಲಿ ನಡೆದ ಏಷಿಯನ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ,2004ರಲ್ಲಿ ಶ್ರೀಲಂಕಾದಲ್ಲಿ ನಡೆದ ಕ್ರೀಡಾಕೂಟದಲ್ಲಿ ಕಂಚಿನ ಪದಕ,2013ರಲ್ಲಿ 34ನೇ ಹಿರಿಯರ ಕ್ರೀಡಾಕೂಟದಲ್ಲಿ ಕಂಚು ಮತ್ತು ಬೆಳ್ಳಿ ಪದಕ,2015ರಲ್ಲಿ ಶ್ರೀಲಂಕದ ಕೊಲೊಂಬೋದಲ್ಲಿ ನಡೆದ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಬೆಳ್ಳಿ ಮತ್ತು ಕಂಚಿನ ಪದಕ,2016ರಲ್ಲಿ ಸಿಂಗಪುರದಲ್ಲಿ ನಡೆದ 19ನೇ ಎಷಿಯನ್ ಹಿರಿಯರ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಪಡೆದಿರುತ್ತಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin