ಕೆಪಿಸಿಸಿ ಅಧ್ಯಕ್ಷ ಸ್ಥಾನ ಸೇರಿದಂತೆ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸಲು ಸಿದ್ಧ : ಜಯಚಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

TB-Jayachandra
ಬೆಂಗಳೂರು, ಮೇ 23- ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನ ಸೇರಿದಂತೆ ಯಾವುದೇ ಜವಾಬ್ದಾರಿ ನೀಡಿದರೂ ವಹಿಸಿಕೊಳ್ಳಲು ಸಿದ್ದ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಸುಮಾರು 40 ವರ್ಷಗಳಿಂದ ಪಕ್ಷದ ನಿಷ್ಠಾವಂತ ಮತ್ತು ಪ್ರಾಮಾಣಿಕ ಕಾರ್ಯಕರ್ತನಾಗಿ ದುಡಿದಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರಿಗೆ ನೀಡಬೇಕೆಂಬುದನ್ನು ಹೈಕಮಾಂಡ್ ತೀರ್ಮಾನಿಸಲಿದೆ. ತಮಗೆ ಯಾವುದೇ ಜವಾಬ್ದಾರಿಯನ್ನು ಪಕ್ಷ ನೀಡಿದರೂ ನಿಭಾಯಿಸುವುದಾಗಿ ಹೇಳಿದರು.


ಜಂತಕಲ್ ಮೈನಿಂಗ್ ಪ್ರಕರಣದ ತನಿಖೆಯಲ್ಲಿ ರಾಜ್ಯ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಎಸ್‍ಐಟಿ ತನಿಖೆ ಕೈಗೊಂಡಿದ್ದು, ವರದಿಯನ್ನು ಸುಪ್ರೀಂಕೋರ್ಟ್‍ಗೆ ಸಲ್ಲಿಸಲಿದೆ. ಹೀಗಾಗಿ ರಾಜ್ಯ ಸರ್ಕಾರ ಮತ್ತು ಯಾವುದೇ ಸಚಿವರ ಕೈವಾಡವಿಲ್ಲ ಎಂದು ತಿಳಿಸಿದರು.
ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅನುಮಾನಸ್ಪದ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿರುವುದನ್ನು ಸ್ವಾಗತಿಸುತ್ತೇವೆ. ಉತ್ತರಪ್ರದೇಶದಲ್ಲಿ ಮೃತಪಟ್ಟಿರುವುದರಿಂದ ಅಲ್ಲಿನ ಸರ್ಕಾರ ಸಿಬಿಐಗೆ ವಹಿಸಿದೆ ಎಂದರು.  ತಿವಾರಿ ಸಾವಿನ ಬಗ್ಗೆ ಸ್ವಯಂ ಪ್ರೇರಿತವಾಗಿ ತನಿಖೆ ನಡೆಸಲು ಸಾಧ್ಯವಿಲ್ಲ ದಾಖಲೆಗಳನ್ನು ಒದಗಿಸಿದರೆ ತನಿಖೆ ಮಾಡಿಸಬಹದು ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin