ಟೆಂಪೋ ಟ್ರಾವೆಲರ್ ಗೆ ಲಾರಿ ಡಿಕ್ಕಿ, 20 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

Accident--01

ರಾಯಚೂರು, ಮೇ 23-ಟೆಂಪೋ ಟ್ರಾವೆಲರ್ಸ್‍ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ 20 ಮಂದಿ ಗಾಯಗೊಂಡು ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಹೊನ್ನೇನಹಳ್ಳಿ ಬಳಿ ನಡೆದಿದೆ.  ಡಿಕ್ಕಿ ಹೊಡೆದ ಲಾರಿ ಪರಾರಿಯಾಗಿದ್ದು, ನಾಲ್ವರು ಗಾಯಾಳುಗಳನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. 15 ಜನ ಗಾಯಾಳುಗಳನ್ನು ಲಿಂಗಸಗೂರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಾಯಗೊಂಡವರು ಹಾವೇರಿ ಜಿಲ್ಲಾ ಮೂಲದವರು ಎಂದು ತಿಳಿದುಬಂದಿದ್ದು, ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin