ಪತಿಯನ್ನು ಮರಕ್ಕೆ ಕಟ್ಟಿ ಹಾಕಿ, ಆತನ ಕಣ್ಣೆದುರೇ ಪತ್ನಿ ಮೇಲೆ ಗ್ಯಾಂಗ್‍ರೇಪ್..!

ಈ ಸುದ್ದಿಯನ್ನು ಶೇರ್ ಮಾಡಿ

GangRape--01

ಬದೌನ್, ಮೇ 24- ದಂಪತಿಯನ್ನು ಅಡ್ಡಗಟ್ಟಿದ ಮೂವರ ದುಷ್ಕರ್ಮಿಗಳು ಪತಿಯನ್ನು ಮರಕ್ಕೆ ಕಟ್ಟಿಹಾಕಿ ಬಾಯಿಗೆ ಬಟ್ಟೆ ತುರುಕಿ ಆತನ ಕಣ್ಣೆದುರೇ 27 ವರ್ಷ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ನೀಚ ಘಟನೆ ಉತ್ತರಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಹೆಲ್ತ್ ಕ್ಲಿನಿಕ್‍ನಿಂದ ಸೋಮವಾರ ರಾತ್ರಿ ದಂಪತಿ ಬೈಕ್‍ನಲ್ಲಿ ಬರುತ್ತಿದ್ದಾಗ ನಿರ್ಜನ ಪ್ರದೇಶದಲ್ಲಿ ಅವರನ್ನು ಮೂವರು ದುಷ್ಕರ್ಮಿಗಳು ಅಡ್ಡಗಟ್ಟಿದರು. ನಂತರ ಪತಿಯನ್ನು ಮರಕ್ಕೆ ಕಟ್ಟಿಹಾಕಿ ಬಾಯಿಗೆ ಬಟ್ಟೆ ತುರುಕಿ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಪರಾರಿಯಾದರು.



ಪಕ್ತದ ಗ್ರಾಮದ ಯುವಕರು ಈ ಕೃತ್ಯ ನಡೆಸಿರುವ ಶಂಕೆ ಇದೆ. ಕಾಮುಕರ ಪತ್ತೆಗೆ ಶೋಧ ಮುಂದುವರಿದಿದೆ ಎಂದು ಸಹಸ್ವಾನ್ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಶಿಯೋರಾಜ್ ಸಿಂಗ್ ತಿಳಿಸಿದ್ದಾರೆ. ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin