ರಾಯಚೂರು : ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Tractor--01

ರಾಯಚೂರು,ಮೇ 24– ಉದ್ಯೋಗಖಾತ್ರಿ ಯೋಜನೆ ಕೆಲಸಕ್ಕೆಂದು ಟ್ರ್ಯಾಕ್ಟರ್‍ನಲ್ಲಿ ಕೂಲಿ ಕಾರ್ಮಿಕರು ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಲ್ಟಿ ಹೊಡೆದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಳಗನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಟ್ರ್ಯಾಕ್ಟರ್ ಚಾಲಕ ಹುಸೇನ್ ಭಾಷಾ(30), ಮಹಿಳೆ ಮುತ್ತಮ್ಮ ಸ್ಥಳದಲ್ಲೇ ಮೃತಪಟ್ಟಿದ್ದು , ಮತ್ತೊಬ್ಬರ ಹೆಸರು ತಿಳಿದುಬಂದಿಲ್ಲ.



ಚಾಲಕನ ನಿಯಂತ್ರಣ ತಪ್ಪಿ ಜವಳಗೆರೆ ಸೆಂಟ್ರಲ್ ಫಾರ್ಮ್ ಹತ್ತಿರ ಟ್ರ್ಯಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆ ರವಾನಿಸಲಾಗಿದೆ. ಗಾಯಾಳುಗಳಿಗೆ ಸಿಂಧನೂರು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಳಗನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Tractor--02

Tractor--03

Facebook Comments

Sri Raghav

Admin