ಸಿಎಂ ಸಿದ್ದರಾಮಯ್ಯನವರ ಜತೆ ಫೋಟೋ ತೆಗೆಸಿಕೊಳ್ಳಲು ಮುಗಿಬಿದ್ದ ಮಹಿಳಾ ಮಣಿಗಳು

ಈ ಸುದ್ದಿಯನ್ನು ಶೇರ್ ಮಾಡಿ

Siddaramaiha--01

ಬೆಂಗಳೂರು, ಮೇ 25- ಮಹಿಳಾ ಮೀಸಲಾತಿ ಪರವಾಗಿ ಸಹಿ ಸಂಗ್ರಹ ಮಾಡುತ್ತಿರುವ ಕಾಂಗ್ರೆಸ್ ಮಹಿಳಾ ಘಟಕದ ಪದಾಧಿ ಕಾರಿಗಳು ಸಿದ್ದರಾಮಯ್ಯ ಅವರ ಜತೆ ಫೋಟೋ ತೆಗೆಸಿಕೊಳ್ಳಲು ಮುಗಿಬಿದ್ದ ಪ್ರಸಂಗ ನಡೆಯಿತು.  ಪಂಚಾಯತ್‍ನಿಂದ ಸಂಸತ್‍ವರೆಗೂ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಕೊಡಬೇಕೆಂಬ ಬೇಡಿಕೆ ಈಡೇರಿಕೆಗಾಗಿ ಕಾಂಗ್ರೆಸ್ ರಾಜ್ಯಮಟ್ಟದ ಸಹಿ ಸಂಗ್ರಹ ಅಭಿಯಾನ ನಡೆಸುತ್ತಿದ್ದು, ಅದರಂತೆ ರಾಜ್ಯ ಮಹಿಳಾ ಘಟಕ ಸಹಿ ಸಂಗ್ರಹ ಆರಂಭಿಸಿದೆ. ಇಂದು ಅದರಂತೆ ಕೆಪಿಸಿಸಿ ಕಚೇರಿಯಲ್ಲಿ ಸಹಿ ಸಂಗ್ರಹ ಮಾಡಲಾಗುತ್ತಿತ್ತು.



ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸುತ್ತಿದ್ದಂತೆ ಸಹಿ ಸಂಗ್ರಹ ಅಭಿಯಾನದಲ್ಲಿ ಸಂಚಲನ ಉಂಟಾಯಿತು. ಸಿಎಂ ಸಹ ಸಂತೋಷದಿಂದಲೇ ಅಭಿಯಾನದಲ್ಲಿ ಭಾಗವಹಿಸಿ ಸಹಿ ಹಾಕುವ ಮೂಲಕ ಬೆಂಬಲ ವ್ಯಕ್ತಪಡಿಸಿದರು.  ನಂತರ ಅವರೊಂದಿಗೆ ಫೋಟೋ ತೆಗೆಸಿಕೊಳ್ಳಲು ಮಹಿಳಾ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಮುಗಿಬಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಸಂತೋಷದಿಂದಲೇ ಫೋಟೋಗೆ ಫೋಸ್ ನೀಡಿದರು.  ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಲಕ್ಷ್ಮೀಹೆಬ್ಬಾಳ್ಕರ್ ಮತ್ತು ಪದಾಧಿಕಾರಿಗಳೊಂದಿಗೆ ಅಷ್ಟೇ ಆತ್ಮೀಯತೆಯಿಂದ ಫೋಟೋ ತೆಗೆಸಿಕೊಂಡರಲ್ಲದೆ, ಲಕ್ಷ್ಮೀಹೆಬ್ಬಾಳ್ಕರ್ ತಲೆಗೆ ಮೊಟಕಿದರು.

ಇದೇ ವೇಳೆ ಸಹಿ ಸಂಗ್ರಹ ಅಭಿಯಾನದಲ್ಲಿ ರಾಜ್ಯ ಉಸ್ತುವಾರಿ ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ಮತ್ತಿತರ ಮುಖಂಡರು ಸಹಿ ಹಾಕಿ ಬೆಂಬಲ ಸೂಚಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin