ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಬ್ಬರು ರೈತರ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Former-Suicide-e01

ಚಿಕ್ಕಮಗಳೂರು, ಮೇ 26– ದಿನದಿಂದ ದಿನಕ್ಕೆ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಇಬ್ಬರು ರೈತರು ಪ್ರತ್ಯೇಕ ಕಡೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.



ತರೀಕೆರೆ: ಅಡಿಕೆ ತೋಟ ಸಂಪೂರ್ಣವಾಗಿ ಒಣಗಿದ್ದಕ್ಕೆ ಬೇಸತ್ತ ರೈತ ಕ್ರಿಮಿನಾಶಕ ಔಷಧಿ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಕೆಂಚಾಪುರ ಗ್ರಾಮದಲ್ಲಿ ನಡೆದಿದೆ. ಚಂದ್ರಪ್ಪ (54) ಆತ್ಮಹತ್ಯೆ ಮಾಡಿಕೊಂಡ ರೈತ.  ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದ ಚಂದ್ರಪ್ಪ ತನಗಿದ್ದ ಜಮೀನಿನಲ್ಲಿ ಅಡಿಕೆ ಬೆಳೆ ಬೆಳೆಯುತ್ತಿದ್ದರು. ಇದರ ಸಲುವಾಗಿ 500 ಅಡಿ ಕೊಳವೆ ಬಾವಿ ಕೊರೆಸಿದ್ದರು. ಆದರೆ, ಇತ್ತೀಚೆಗೆ ಕೊಳವೆ ಬಾವಿಯಲ್ಲಿ ನೀರು ನಿಂತುಹೋಗಿದ್ದರಿಂದ ಅಡಿಕೆ ತೋಟ ಸಂಪೂರ್ಣವಾಗಿ ಒಣಗಿ ಹೋಗಿತ್ತು. ಇದರಿಂದ ನೊಂದು ಕೀಟನಾಶಕ ಔಷಧಿ ಸೇವಿಸಿ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡೂರು:

ಸಾಲಬಾಧೆಗೆ ನೊಂದ ಮತ್ತೊಬ್ಬ ರೈತ ಹೊಂಗೆಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ತಾಲೂಕಿನ ಟಿ.ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ತಿಮ್ಮಪ್ಪ (66) ಆತ್ಮಹತ್ಯೆ ಮಾಡಿಕೊಂಡ ರೈತ.  ರೈತ ತಿಮ್ಮಪ್ಪ ತಮ್ಮ 1.12 ಎಕರೆ ಜಮೀನಿನಲ್ಲಿ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕೃಷಿಗಾಗಿ ಕಾರ್ಪೊರೇಷನ್ ಬ್ಯಾಂಕ್‍ನಲ್ಲಿ 1 ಲಕ್ಷ ಹಾಗೂ 1.5 ಲಕ್ಷ ರೂ. ಕೈಸಾಲ ಮಾಡಿಕೊಂಡಿದ್ದರು.   ಇತ್ತೀಚೆಗೆ ನೀರಿಲ್ಲದೆ ಬೆಳೆ ನಾಶವಾಗಿತ್ತು. ಇದರಿಂದ ನೊಂದ ತಿಮ್ಮಪ್ಪ ಹೊಂಗೆಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin