ದೇಶಾದ್ಯಂತ ಗೋಹತ್ಯೆ ನಿಷೇಧಕ್ಕೆ ಹೊಸ ಕಾನೂನು

ಈ ಸುದ್ದಿಯನ್ನು ಶೇರ್ ಮಾಡಿ

Cow

ನವದೆಹಲಿ, ಮೇ 26-ದೇಶಾದ್ಯಂತ ಗೋಹತ್ಯೆಗೆ ಕೇಂದ್ರ ಸರ್ಕಾರ ನಿಷೇಧ ಹೇರಿದ್ದು ಧಾರ್ಮಿಕ ಉದ್ದೇಶಗಳಿಗೆ ಗೋವುಗಳನ್ನು ಹತ್ಯೆ ಮಾಡುವುದನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಿದೆ.ಈ ಸಂಬಂಧ ನಿನ್ನೆ ಅಧಿಸೂಚನೆ ಹೊರಡಿಸಲಾಗಿದೆ. ಗೋಹತ್ಯೆ ನಿಷೇಧಕ್ಕಾಗಿ ಕೇಂದ್ರ ಸರ್ಕಾರ ಹೊಸ ಕಾನೂನು ರೂಪಿಸಿದೆ. ಗೋವುಗಳನ್ನು ಕಸಾಯಿಖಾನೆಗಳಿಗೆ ಮಾರಾಟ ಮಾಡುವಂತಿಲ್ಲ.



ರೈತರ ಮತ್ತು ಭೂಮಾಲಿಕರು ಮಾತ್ರ ಗೋವುಗಳನ್ನು ಖರೀದಿಸುವ ಮತ್ತು ಮಾರಾಟ ಮಾಡಬೇಕು ಎಂದು ಈ ಕಾನೂನಿನಲ್ಲಿ ತಿಳಿಸಲಾಗಿದೆ. ಧಾರ್ಮಿಕ ಉದ್ದೇಶಗಳಿಗೆ ಅಥವಾ ಕಾರ್ಯಕ್ರಮಗಳಿಗೆ ಗೋವಧೆ ಮಾಡುವುದಕ್ಕೆ ಸರ್ಕಾರ ನಿಷೇಧ ಹೇರಿದೆ. ದೇಶಾದ್ಯಂತ ಗೋಹತ್ಯೆ ನಿಷೇಧಕ್ಕಾಗಿ ಜಾರಿಗೊಳಿಸಲಾಗಿರುವ ಪ್ರಥಮ ಕಾನೂನು ಇದಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin