ಕಾರು ಉರುಳಿ ಬಿದ್ದು ಇಬ್ಬರು ಸಾವು , ಐವರು ಗಂಭೀರ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Car-Accident

ಚಿಕ್ಕಬಳ್ಳಾಪುರ, ಮೇ 29- ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ ಅದರಲ್ಲಿದ್ದ ಇಬ್ಬರು ಮಹಿಳೆಯರು ಮೃತಪಟ್ಟು, ಐವರು ಗಂಭೀರವಾಗಿ ಗಾಯ ಗೊಂಡಿರುವ ಘಟನೆ ತಾಲ್ಲೂಕಿನ ಗುಡಿಬಂಡೆ ಬಳಿಯ ಆರೂರು ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೆಂಗಳೂರಿನ ಇಂದಿರಾನಗರ ನಿವಾಸಿ ಅನಿತಾ (36) ಮತ್ತು ರಾಜಮ್ಮ (64) ಎಂದು ತಿಳಿದು ಬಂದಿದೆ.  ಶರ್ಮಿಳಾ, ದೀಪಿಕಾ ಹಾಗೂ ವೆಂಕಟೇಶ್ ಎಂಬುವವರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.  ಇವರು ಸ್ನೇಹಿತರೊಬ್ಬರ ಮದುವೆ ಸಮಾರಂಭ ಮುಗಿಸಿಕೊಂಡು ಬೆಂಗಳೂರಿಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.  ಗುಡಿಬಂಡೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin