ಬೆಂಗಳೂರಿನಲ್ಲಿ ಕನ್ನಡ ಭಾಷೆಗೆ ಆಧ್ಯತೆ ನೀಡುವಂತೆ ವಾಟಾಳ್ ಆಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

mayor

ಬೆಂಗಳೂರು, ಮೇ 29- ನಾಡಪ್ರಭು ಕೆಂಪೇಗೌಡರು ಕಟ್ಟಿದ ರಾಜ್ಯದ ರಾಜಧಾನಿಯಲ್ಲಿ ಕನ್ನಡಕ್ಕೆ ಸಾರ್ವಭೌಮತ್ವ, ಕನ್ನಡಿಗರಿಗೆ ಉದ್ಯೋಗ ಹಾಗೂ ಕನ್ನಡ ನಾಮಫಲಕಕ್ಕೆ ಆದ್ಯತೆ ನೀಡುವಂತೆ ಮೇಯರ್ ಜಿ. ಪದ್ಮಾವತಿ ಅವರಿಗೆ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್, ಕರವೇಯ ಪ್ರವೀಣ್‍ಕುಮಾರ್ ಶೆಟ್ಟಿ ನಿಯೋಗ ಮನವಿ ಮಾಡಿತು.  ನಂತರ ಸುದ್ದಿಗಾರರೊಂದಿಗೆ ವಾಟಾಳ್ ನಾಗರಾಜ್ ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯನ್ನಾಗಿ ಅನುಷ್ಠಾನಗೊಳಿಸು ವಂತೆ ಒತ್ತಾಯಿಸಿ ಜೂನ್ 12ರಂದು ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿದೆ ಎಂದು ತಿಳಿಸಿದರು.


ಬೆಂಗಳೂರು ನಗರದಲ್ಲಿ ಪರ ಭಾಷಿಕರೆ ತುಂಬಿದ್ದಾರೆ. ಹಾಗಾಗಿ ಕನ್ನಡ ಭಾಷೆ ಬೆಳವಣಿಗೆಯಲ್ಲಿ ಹಿಂದೆ ಬಿದ್ದಿದೆ. ಉದ್ಯೋಗಗಳು ಪರಭಾಷಿಕರ ಪಾಲಾಗುತ್ತಿವೆ ಎಂದು ವಿಷಾದ ವ್ಯಕ್ತಪಡಿಸಿದರು.  ಬೆಂಗಳೂರು ನಗರದ ಯಾವ ಮೂಲೆಯಲ್ಲೂ ನೋಡಿ ದರೂ ಇಂಗ್ಲಿಷ್ ನಾಫಲಕಗಳೇ ರಾರಾಜಿಸು ತ್ತಿವೆ. ಕನ್ನಡ ನಾಮಫಲಕಗಳು ಕಣ್ಮರೆಯಾಗುತ್ತಿರುವುದು ದುಃಖದ ಸಂಗತಿಯಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಕನ್ನಡಿಗರಿಗೂ ಉದ್ಯೋಗ ನೀಡಬೇಕು. ಕನ್ನಡ ನಾಮಫಲಕಗಳಿಗೆ ಆದ್ಯತೆ ನೀಡ ಬೇಕು ಎಂದು ಮನವಿ ಮಾಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin