ವಿಶ್ವವಿದ್ಯಾನಿಲಯಗಳಲ್ಲಿ ಏಕರೂಪ ಕಾಯ್ದೆ

ಈ ಸುದ್ದಿಯನ್ನು ಶೇರ್ ಮಾಡಿ

basavaraj--reddy

ಬೆಂಗಳೂರು, ಮೇ 30– ವಿಶ್ವವಿದ್ಯಾನಿಲಯಗಳಲ್ಲಿ ಏಕರೂಪ ಕಾಯ್ದೆ ತರಲು ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜರಾಯರೆಡ್ಡಿ ಇಂದಿಲ್ಲಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶ್ವವಿದ್ಯಾನಿಲಯಗಳನ್ನು ನಿಯಂತ್ರಿಸಲು ಸಮಗ್ರ ಕಾಯ್ದೆಯ ಅವಶ್ಯಕವಿದ್ದು, ಈ ನಿಟ್ಟಿನಲ್ಲಿ ಏಕರೂಪ ಕಾಯ್ದೆಯನ್ನು ಜಾರಿಗೊಳಿಸಲು ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುತ್ತಿದೆ ಎಂದರು.ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷಾ ಶುಲ್ಕವನ್ನು 530ರಿಂದ 1295ರೂ.ಗಳಿಗೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರದ ಆದಾಯ ತೆರಿಗೆ ಇಲಾಖೆ ಈ ವಿಶ್ವವಿದ್ಯಾಲಯದ 441 ಕೋಟಿ ರೂ. ಮುಟ್ಟುಗೋಲು ಹಾಕಿಕೊಂಡಿದೆ. ಇದರಿಂದ ವಿಟಿಯು ಬಳಿ ಹಣವಿಲ್ಲ. ಮುಚ್ಚುವ ಸ್ಥಿತಿ ತಲುಪಿದೆ ಎಂದರು.ಆರು ತಿಂಗಳಿನಿಂದ ವಿಟಿಯು ಫಲಿತಾಂಶ ಪ್ರಕಟಿಸಿಲ್ಲ. ಸಿಂಡಿಕೇಟ್ ಸದಸ್ಯರೊಬ್ಬರು ಲಂಚ ಕೇಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸದಸ್ಯರ ಕ್ರಮಕ್ಕೂ ಸೂಚಿಸಿದ್ದೇವೆ. ಇಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಹಿಂದಿನ ಕುಲಪತಿ ಅಕ್ರಮ ನಡೆಸಿದ್ದಾರೆ. ಈ ಬಗ್ಗೆ ತನಿಖೆಗೂ ಆದೇಶಿಸಿದ್ದೇವೆ. ಅಕ್ರಮ ನಡೆದಿರುವ ಬಗ್ಗೆ ಸೂಕ್ತ ಕ್ರಮ ವಹಿಸಲಾಗುವುದು ಎಂದರು.  ಸುದ್ದಿಗೋಷ್ಠಿಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್‍ಪಾಟೀಲ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವೇದ್, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುಳಾ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಮಂಜುನಾಥ್ ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin