ಪಾರ್ವತಮ್ಮ ನಿಧನಕ್ಕೆ ಸಿಎಂ ತೀವ್ರ ಸಂತಾಪ

ಈ ಸುದ್ದಿಯನ್ನು ಶೇರ್ ಮಾಡಿ

Parvatamma--Raj

ಬೆಂಗಳೂರು, ಮೇ 31– ಕನ್ನಡ ಚಲನಚಿತ್ರರಂಗದ ಹೆಸರಾಂತ ನಿರ್ಮಾಪಕಿ ಡಾ.ಪಾರ್ವತಮ್ಮ ರಾಜ್‍ಕುಮಾರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.   ಪಾರ್ವತಮ್ಮ ಅವರು ಮೂಲತಃ ನಮ್ಮ ಮೈಸೂರು ಜಿಲ್ಲೆಯವರು. ಎಂಬತ್ತಕ್ಕೂ ಹೆಚ್ಚು ಚಿತ್ರಗಳನ್ನು ನಿರ್ಮಿಸಿ ಹಣ ಮತ್ತು ಹೆಸರು ಎರಡನ್ನೂ ಗಳಿಸಿದ ಪ್ರತಿಭಾವಂತೆ. ಒಂದೆಡೆ ಕನ್ನಡ ಚಲನಚಿತ್ರರಂಗಕ್ಕೆ ಹಲವು ಕಲಾವಿದರನ್ನು ಹಾಗೂ ತಂತ್ರಜ್ಞರನ್ನು ಪರಿಚಯಿಸಿ, ಅವರಿಗೆ ಬದುಕು ಕಟ್ಟಿಕೊಟ್ಟ ಕೀರ್ತಿಯೂ ಅವರದು. ಮತ್ತೊಂದೆಡೆ ಕನ್ನಡ ಚಿತ್ರರಂಗದ ಮಾರುಕಟ್ಟೆಯ ಮೌಲ್ಯವನ್ನು ವೃದ್ಧಿಸಿದ ಹಾಗೂ ವ್ಯಾಪ್ತಿಯನ್ನು ವಿಸ್ತರಿಸಿದ ಹೆಗ್ಗಳಿಕೆಯೂ ಅವರದು.


ನಟ ಸಾರ್ವಭೌಮ ಡಾ.ರಾಜ್‍ಕುಮಾರ್ ಅವರ ಯಶಸ್ಸಿನ ಒಂದು ಭಾಗವೇ ಆಗಿದ್ದ ಪಾರ್ವತಮ್ಮ ಅವರು ಪ್ರತಿ ಯಶಸ್ವೀ ಪುರುಷನ ಹಿಂದೆ ಓರ್ವ ಮಹಿಳೆ ಇರುತ್ತಾಳೆ ಎಂಬ ನಾಣ್ನುಡಿಗೆ ಅತ್ಯುತ್ತಮ ಉದಾಹರಣೆ ಎಂದು ಸಿದ್ದರಾಮಯ್ಯ ಅವರು ಬಣ್ಣಿಸಿದ್ದಾರೆ. ಪಾರ್ವತಮ್ಮ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಪಾರ್ವತಮ್ಮ ಅವರ ಅಗಲಿಕೆಯಿಂದ ಉಂಟಾದ ದುಃಖ ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಗವಂತನಲ್ಲಿ ಪ್ರಾರ್ಥಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin