ಕಾಶ್ಮೀರದ ಸೋಪೋರ್‍ನ ಮನೆಯೊಂದರಲ್ಲಿ ಎನ್‍ಕೌಂಟರ್ : ಇಬ್ಬರು ಉಗ್ರರು ಬಲಿ

ಈ ಸುದ್ದಿಯನ್ನು ಶೇರ್ ಮಾಡಿ

Encounter--01

ಶ್ರೀನಗರ, ಜೂ. 1-ಕಾಶ್ಮೀರ ಕಣಿವೆಯಲ್ಲಿ ವಿಧ್ವಂಸಕ ಕೃತ್ಯಗಳನ್ನು ಎಸಗಲು ಹವಣಿಸುತ್ತಿರುವ ಉಗ್ರರ ಕುತಂತ್ರಗಳನ್ನು ಭಾರತೀಯ ಸೇನಾ ಪಡೆಗಳು ಯಶಸ್ವಿಯಾಗಿ ವಿಫಲಗೊಳಿಸುತ್ತಿವೆ. ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೋರ್‍ನ ಮನೆಯೊಂದರಲ್ಲಿ ಅವಿತಿಟ್ಟುಕೊಂಡಿದ್ದ ಇಬ್ಬರು ಭಯೋತ್ಪಾದಕರನ್ನು ಯೋಧರು ಹೊಡೆದುರುಳಿಸಿದ್ದಾರೆ. ಈ ಪ್ರದೇಶದಲ್ಲಿ ಇರಬಹುದಾಗ ಮತ್ತಷ್ಟು ಉಗ್ರಗಾಮಿಗಳನ್ನು ಸದೆ ಬಡಿಯಲು ಕಾರ್ಯಾಚರಣೆ ಮುಂದುವರಿದಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.



ಪಾಕಿಸ್ತಾನ ಬೆಂಬಲಿತ ಉಗ್ರರು ಇರುವ ಬಗ್ಗೆ ದೊರೆತ ಖಚಿತ ಸುಳುವಿನ ಮೇರೆಗೆ ಭದ್ರತಾ ಪಡೆಗಳು ಇಂದು ಮುಂಜಾನೆ 3.30ರಲ್ಲಿ ಸೋಪೋರ್‍ನ ನಾಟಿಪೋಟಾ ಪ್ರದೇಶವನ್ನು ಸುತ್ತುವರೆದು ಕಾರ್ಯಾಚರಣೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಮನೆಯೊಂದರಲ್ಲಿ ಬಚ್ಚಿಟ್ಟುಕೊಂಡಿದ್ದ ಉಗ್ರರು ಯೋಧರತ್ತ ಗುಂಡು ಹಾರಿಸಿದರು. ಯೋಧರು ಪ್ರತಿದಾಳಿ ನಡೆಸಿದಾಗ ಕೆಲಕಾಲ ಗುಂಡಿನ ಚಕಮಕಿ ನಡೆಯಿತು. ಇಬ್ಬರು ಉಗ್ರರನ್ನು ಎನ್‍ಕೌಂಟರ್‍ನಲ್ಲಿ ಹತರಾದರು. ಮೃತರಿಂದ ಬಂದೂಕುಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin