ಹುಟ್ಟುಹಬ್ಬದ ಸಂಭ್ರಮದಲ್ಲಿ ಶಾಸಕ ಚಲುವರಾಯಸ್ವಾಮಿ : ಅಭಿಮಾನಿಗಳಿಂದ ವಿಶೇಷ ಪೂಜೆ

ಈ ಸುದ್ದಿಯನ್ನು ಶೇರ್ ಮಾಡಿ

Chaluva

ಮಂಡ್ಯ, ಜೂ.1- ನಾಗಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಚಲುವರಾಯಸ್ವಾಮಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ವಿದ್ಯಾನಗರದಲ್ಲಿರುವ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಪ್ರೇರಣಾ ಅಂಧ ಮತ್ತು ವಿಕಲಚೇತನ ಮಕ್ಕಳ ಶಾಲೆಯಲ್ಲಿ ಕಾರ್ಯಕರ್ತರು ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದರು. ಬಳಿಕ ಅಂಧ ಮಕ್ಕಳಿಗೆ ಹಣ್ಣುಗಳನ್ನು ವಿತರಿಸಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ದೇವರು ಅವರಿಗೆ ಶಕ್ತಿ, ಧೈರ್ಯ ನೀಡಲಿ. ರಾಜಕೀಯ ಅಭಿವೃದ್ಧಿಗಾಗಿ ವಿಶೇಷ ಪೂಜೆ ಸಲ್ಲಿಸಿದ್ದೇವೆ ಎಂದು ಮುಖಂಡ ಪುಟ್ಟಸ್ವಾಮಿ ತಿಳಿಸಿದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸೋಮಶೇಖರ್ ಸೇರಿದಂತೆ ಅಪಾರ ಅಭಿಮಾನಿಗಳು, ಕಾರ್ಯಕರ್ತರು ಇದ್ದರು.

Facebook Comments

Sri Raghav

Admin