2626 ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಸುದ್ದಿಯನ್ನು ಶೇರ್ ಮಾಡಿ

Police01

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 2626 ಪೊಲೀಸ್ ಕಾನ್ಸ್ಟೇಬಲ್ ನಾಗರೀಕ (ಪುರುಷ ಮತ್ತು ಮಹಿಳಾ)  ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.



ಹುದ್ದೆಗಳ ವಿವರ ಇಂತಿವೆ:

ಪೊಲೀಸ್ ಕಾನ್ಸ್ ಟೇಬಲ್ (ನಾಗರಿಕ)(ಪುರುಷ) : 1980,
ಪೊಲೀಸ್ ಕಾನ್ಸ್ ಟೇಬಲ್ (ನಾಗರಿಕ)(ಮಹಿಳಾ) : 496
ಪುರುಷ ಸ್ಥಳೀಯೇತರ ವೃಂದ (ಉಳಿದ ಮೂಲ ವೃಂದ)-ರೈಲ್ವೇಸ್ : 120
ಮಹಿಳಾ ಸ್ಥಳೀಯೇತರ ವೃಂದ (ಉಳಿದ ಮೂಲ ವೃಂದ)-ರೈಲ್ವೇಸ್ : 30

ವಿದ್ಯಾರ್ಹತೆ:  ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ
ವೇತನ ಶ್ರೇಣಿ: 11600 ರಿಂದ 21000 ರೂ. ತಿಂಗಳಿಗೆ.
ಅರ್ಜಿ ಶುಲ್ಕ : ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 250ರೂ. ಪ.ಜಾ/ಪ.ಪಂ/ಪ್ರ-1 ರ ಅಭ್ಯರ್ಥಿಗಳಿಗೆ 100 ರೂ.



ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-06-2017
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 14-06-2017

ವಯೋಮಿತಿ : ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು( 12-06-2017) ಅಭ್ಯರ್ಥಿಗೆ ಕನಿಷ್ಠ 19 ವರ್ಷ ವಯಸ್ಸಾಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದೂಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಕನಿಷ್ಠ 27 ವರ್ಷಗಳು. ಸಾಮಾನ್ಯ ಅಭ್ಯರ್ಥಿಗಳಿಗೆ 25 ವರ್ಷಗಳು. ಕರ್ನಾಟಕ ರಾಜ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಹಾಗೂ ನೇಮಕಾತಿ ಕುರಿತಂತೆ ಹೆಚ್ಚಿನ ವಿವರಗಳಿಗಾಗಿ www.ksp.gov.in ಗೆ ಭೇಟಿ ನೀಡಿ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್ಕಿಸಿ 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin