ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್‍ ಪಾಸ್, ಸಿಎಂ ಸಿದ್ದರಾಮಯ್ಯ ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah--01dag

ಬೆಂಗಳೂರು, ಜೂ.2– ಇದೇ ಶೈಕ್ಷಣಿಕ ವರ್ಷದಿಂದ ಎಸ್ಸಿ-ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ ಉಚಿತ ಬಸ್‍ಪಾಸ್ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 2017-18ನೇ ಸಾಲಿನ ಎಸ್ಸಿ-ಎಸ್ಟಿ, ಟಿಎಸ್‍ಪಿ ಉಪಯೋಜನೆಯ ಅನುದಾನದ ಬಳಕೆ ಕುರಿತು ಸಭೆ ನಡೆಸಿದ ಸಿದ್ದರಾಮಯ್ಯ ಅವರು, ಶಾಲಾ ಹಂತದಿಂದ ಕಾಲೇಜು ಹಂತದವರೆಗೂ ಎಸ್ಸಿ-ಎಸ್ಟಿ ಸಮುದಾಯದ ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್‍ಪಾಸ್ ನೀಡುವುದಾಗಿ ತಿಳಿಸಿದರು.ಈಗಿರುವ ವ್ಯವಸ್ಥೆಯಲ್ಲಿ ಎಸ್ಸಿ-ಎಸ್ಟಿ ಸಮುದಾಯದ ವಿದ್ಯಾರ್ಥಿಗಳಿಗೆ ರಿಯಾಯ್ತಿ ದರದಲ್ಲಿ ಪಾಸ್ ನೀಡಲಾಗುತ್ತಿದೆ. ಶೇ.50ರಷ್ಟನ್ನು ಸರ್ಕಾರ, ಶೇ.25ರಷ್ಟನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಭಿವೃದ್ಧಿ ನಿಗಮ, ಬಾಕಿ ಉಳಿದಿರುವ ಶೇ.25ರಷ್ಟನ್ನು ವಿದ್ಯಾರ್ಥಿಗಳು ಭರಿಸುತ್ತಿದ್ದಾರೆ. ಇನ್ನು ಮುಂದೆ ವಿದ್ಯಾರ್ಥಿಗಳಿಂದ ಹಣ ಪಡೆಯದೆ ಉಚಿತ ಬಸ್‍ಪಾಸ್ ನೀಡಲು ಸಿಎಂ ಹೇಳಿದರು. ಇದಕ್ಕೆ ಅಗತ್ಯವಾದ ಪ್ರಸ್ತಾವನೆಯನ್ನು ಕಳುಹಿಸುವಂತೆ ಸಾರಿಗೆ ಇಲಾಖೆಗೆ ತಾಕೀತು ಮಾಡಿದರು.

ಎಸ್ಸಿ-ಎಸ್ಟಿ ಸಮುದಾಯಕ್ಕೆ ಉಚಿತ ಬಸ್ ಪಾಸ್ ನೀಡಲು ವಾರ್ಷಿಕ 108ಕೋಟಿ ಖರ್ಚಾಗಲಿದ್ದು, ಇದನ್ನು ಎಸ್ಸಿ-ಎಸ್ಟಿ ಮತ್ತು ಟಿಎಸ್‍ಪಿ ಈ ಉಪ ಯೋಜನೆಯ ಬಳಕೆಯನ್ನು ಬಳಕೆ ಮಾಡಿಕೊಳ್ಳುವಂತೆ ಸಿದ್ದರಾಮಯ್ಯ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin