ದುರ್ನಡತೆ : ಶಾಸಕ ಮುನಿರತ್ನ ವಿರುದ್ಧ ಗೌರ್ನರ್‍ಗೆ ದೂರು ನೀಡಿದ ಮಹಿಳಾ ಸದಸ್ಯರು

ಈ ಸುದ್ದಿಯನ್ನು ಶೇರ್ ಮಾಡಿ

Muniratna--01

ಬೆಂಗಳೂರು,ಜೂ.2– ಬಿಬಿಎಂಪಿ ಮಹಿಳಾ ಸದಸ್ಯರ ಮೇಲೆ ಹಲ್ಲೆ ಸೇರಿದಂತೆ ದುರ್ನಡತೆ ತೋರುತ್ತಿರುವ ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ನಾಯ್ಡು ವಿರುದ್ಧ ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಬಿಜೆಪಿ ನಿಯೋಗ ಇಂದು ರಾಜ್ಯಪಾಲರಿಗೆ ದೂರು ನೀಡಿದೆ. ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ , ವಿಧಾನಪರಿಷತ್ ಸದಸ್ಯೆ ತಾರಾ ಅನುರಾಧ, ಪಕ್ಷದ ವಕ್ತಾರರಾದ ಮಾಳವಿಕ ಅವಿನಾಶ್, ಬಿಬಿಎಂಪಿ ಸದಸ್ಯೆ ಮಮತಾ ವಾಸುದೇವ್ ಸೇರಿದಂತೆ ಮತ್ತಿತರ ನಿಯೋಗವು ರಾಜ್ಯಪಾಲ ವಿ.ಆರ್.ವಾಲಾ ಅವರನ್ನು ಭೇಟಿ ಮಾಡಿ ದೂರು ನೀಡಿತು.ಮುನಿರತ್ನ ನಾಯ್ಡು ಹಾಗೂ ಅವರ ಬೆಂಬಲಿಗರು ದಾಂಧಲೆ ನಡೆಸಿರುವ ಪ್ರಕರಣಗಳ ದಾಖಲೆಗಳು, ಭಾವಚಿತ್ರ, ಮಹಿಳೆಯರ ಮೇಲೆ ಹಲ್ಲೆ, ದೌರ್ಜನ್ಯ ಸೇರಿದಂತೆ ಶಾಸಕರ ಪಟಾಲಂ ನಡೆಸುತ್ತಿರುವ ಆಟಾಟೊಪಗಳಿಗೆ ಕಡಿವಾಣ ಹಾಕುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.  ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹಸಚಿವರು, ನಗರ ಪೊಲೀಸ್ ಆಯುಕ್ತರು ಸೇರಿದಂತೆ ಸಂಬಂಧಪಟ್ಟವರ ಜೊತೆ ಚರ್ಚಿಸಿ ಮಹಿಳಾ ಸದಸ್ಯರಿಗೆ ಸೂಕ್ತ ರಕ್ಷಣೆ ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡುವುದಾಗಿ ರಾಜ್ಯಪಾಲರು ನಿಯೋಗಕ್ಕೆ ಆಶ್ವಾಸನೆ ಕೊಟ್ಟಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪದ್ಮನಾಭ ರೆಡ್ಡಿ , ಇತ್ತೀಚೆಗೆ ಮಹಿಳಾ ಸದಸ್ಯೆ ಮಂಜುಳಾ ನಾರಾಯಣ ಸ್ವಾಮಿ ಮೇಲೆ ಮುಖ್ಯಮಂತ್ರಿಗಳು ಇದ್ದ ವೇದಿಕೆಯಲ್ಲೇ ದೌರ್ಜನ್ಯ ನಡೆಸಲಾಗಿದೆ. ಇದೇ ರೀತಿ ಇನ್ನು ಅನೇಕ ಮಹಿಳಾ ಸದಸ್ಯರ ಮೇಲೆ ಮುನಿರತ್ನ ಮತ್ತು ಅವರ ಬೆಂಬಲಿಗರು ದೌರ್ಜನ್ಯ ನಡೆಸಿದ್ದಾರೆ. ಅವರ ವಿರುದ್ದ ಸೂಕ್ತ ಕ್ರಮ ಜರುಗಿಸಲು ರಾಜ್ಯಪಾಲರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.   ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ಒಂದೆಡೆ ಜನಸಾಮಾನ್ಯರಿಗೆ ರಕ್ಷಣೆ ಇಲ್ಲದಂತಾಗಿರುವಾಗ ಮತ್ತೊಂದೆಡೆ ಜನಪ್ರತಿನಿಧಿಗಳ ಮೇಲೆ ಹಾಡಹಗಲೇ ದೌರ್ಜನ್ಯಗಳು ನಡೆಯುತ್ತವೆ. ಸರ್ಕಾರ ಇದ್ದು ಇಲ್ಲದಂತಾಗಿದೆ ಎಂದು ದೂರಿದರು.

ಮುನಿರತ್ನ ಮತ್ತು ಅವರ ಬೆಂಬಲಿಗರ ವಿರುದ್ಧ ಕ್ರಮ ಜರುಗಿಸಲು ರಾಜ್ಯಪಾಲರಿಗೆ ಮನವಿ ಮಾಡಿಕೊಂಡಿದ್ದೇವೆ. ಅವರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರದಲ್ಲಿ ಯಾರೊಬ್ಬರೂ ಯಾವುದೇ ವಿಷಯಕ್ಕೆ ವಿರೋಧ ವ್ಯಕ್ತಪಡಿಸಬಾರದು. ಕಳಪೆ ಕಾಮಗಾರಿ, ಕಾಲುವೆ, ರಸ್ತೆ ನಿರ್ಮಾಣ, ಬೀದಿ ದೀಪ, ಕುಡಿಯುವ ನೀರು ಸೇರಿದಂತೆ ಯಾವುದೇ ವಿಷಯಗಳಿಗೆ ತಕರಾರು ತೆಗೆದರೆ ಗೂಂಡಾಗಳನ್ನು ಬಿಟ್ಟು ಹಲ್ಲೆ ನಡೆಸುತ್ತಾರೆ. ಸರ್ಕಾರ ಸೂಕ್ತವಾದ ರಕ್ಷಣೆ ಕೊಡಬೇಕೆಂದು ಮನವಿ ಮಾಡಿದರು.ಕೇವಲ ಮಂಜುಳಾ ನಾರಾಯಣಸ್ವಾಮಿ ಅವರ ಮೇಲೆ ಮುನಿರತ್ನ ಮತ್ತು ಅವರ ಬೆಂಬಲಿಗರು ಈ ರೀತಿ ಮಹಿಳಾ ಸದಸ್ಯರ ಮೇಲೆ ಅನೇಕ ಬಾರಿ ಹಲ್ಲೆ ನಡೆಸಿದ್ದಾರೆ. ಸರ್ಕಾರ ಅವರಿಗೆ ಮೂಗುದಾರ ಹಾಕದಿದ್ದರೆ ಪಕ್ಷದಿಂದ ಉಗ್ರ ಹೋರಾಟ ಮಾಡಬೇಕೆಂದು ಎಚ್ಚರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin