ಕಾರ್ಯಕ್ರಮದ ಗ್ರಾಮಸ್ಥರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಪಲ್ಟಿ, ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ
ಸಾಂಧರ್ಭಿಕ ಚಿತ್ರ
ಸಾಂಧರ್ಭಿಕ ಚಿತ್ರ

ಕಡೂರು, ಜೂ.3- ಕಾರ್ಯಕ್ರಮದ ನಿಮಿತ್ತ ಗ್ರಾಮಸ್ಥರನ್ನು ಕರೆದುಕೊಂಡು ತೆರಳುತ್ತಿದ್ದ ಟ್ರ್ಯಾಕ್ಟರ್ ಮಗುಚಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, 30ಕ್ಕೂ ಹೆಚ್ಚು ಜನರು ಗಾಯಗೊಂಡ ದಾರುಣ ಘಟನೆ ನಡೆದಿದೆ. ತಾಲೂಕಿನ ಹಿರೇನಲ್ಲೂರು ಹೋಬಳಿ ಕಲ್ಕರೆ ಗ್ರಾಮದ ಮನೆಯಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ತಾಲೂಕಿನ ತಂಗಲಿ ಗ್ರಾಮದಲ್ಲಿ ವಾಸವಾಗಿರುವ ಸಂಬಂಧಿಕರು ಗಂಗಾಮತಸ್ಥ ಸಮುದಾಯದ 30 ಜನರು ಟ್ರ್ಯಾಕ್ಟರ್‍ನಲ್ಲಿ ತೆರಳುತ್ತಿದ್ದರು.  ಹಿರೇನಲ್ಲೂರು ಗ್ರಾಮದ ಮೆಸ್ಕಾಂ ಕಚೇರಿಯ ಬಳಿಯಿರುವ ತಿರುವಿನಲ್ಲಿ ಅತೀ ವೇಗವಾಗಿ ಚಲಿಸುತ್ತಿದ್ದ ಟ್ರ್ಯಾಕ್ಟರ್ ಚಾಲಕನ ಅಜಾಗರುಕತೆಯಿಂದ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅಪಘಾತದ ರಭಸಕ್ಕೆ ಟ್ರ್ಯಾಕ್ಟರ್‍ನಲ್ಲಿದ್ದ ವೇದಾ(35) ಮತ್ತು ರಂಗಮ್ಮ(60) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದರೆ, 25ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, ಅದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ 10 ಜನರನ್ನು ಶಿವಮೊಗ್ಗ ಆಸ್ಪತ್ರೆಗೆ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.
ಗಾಯಗೊಂಡಿದ್ದ ಮಕ್ಕಳಾದ ಪ್ರಜ್ವಲ್(13), ಅರ್ಪಿತಾ (9), ಲಾವಣ್ಯ(8), ಚಿಂತನಾ(2.5), ಜೇಷ್ಟ(3) ಚಂದನ್(12), ಚೇತನ್(11) ಅವರ ಆರ್ತನಾದ ಸ್ಥಳದಲ್ಲಿ ಹಾಜರಿದ್ದ ಮನ ಕಳುಕುತ್ತಿತ್ತು.ಉಳಿದ ಗಾಯಾಳುಗಳನ್ನು ಕಡೂರು ಮತ್ತು ಬೀರೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಶಾಸಕ ವೈ.ಎಸ್.ವಿ. ದತ್ತ ಎರಡೂ ಆಸ್ಪತ್ರೆಗಳಿಗೆ ಭೇಟಿ ನೀಡಿ ಗಾಯಾಳುಗಳಿಗೆ ಸಾಂತ್ವನ ಹೇಳಿ, ವೈಯಕ್ತಿಕ ಪರಿಹಾರ ನೀಡಿದರು.  ಗಾಯಗೊಂಡ ಜನರನ್ನು ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆತರಲಾಯಿತು, ಈ ಸಂದರ್ಭ ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕ ಆಸ್ಪತ್ರೆ ವೈದ್ಯರು ಮತ್ತು ದಾದಿಯರ ಕಾರ್ಯಕ್ಕೆ ಅಭಿನಂದಿಸಿದರು.  ಗಂಭೀರವಾಗಿ ಗಾಯಗೊಂಡ 10 ಜನರು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಇವರಲ್ಲಿ ಒಬ್ಬರ ಪರಿಸ್ಥಿತಿ ಗಂಭೀರವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin