19ಕ್ಕೆ ‘ಬಹುರಾಷ್ಟ್ರೀಯ ಕಂಪೆನಿಗಳೇ ಭಾರತಬಿಟ್ಟು ತೊಲಗಿ’ ಆಂದೋಲನ

ಈ ಸುದ್ದಿಯನ್ನು ಶೇರ್ ಮಾಡಿ

MNC

ಬೆಂಗಳೂರು, ಜೂ.3- ಕಾರ್ಮಿಕರ ಜತೆ ಅನುಚಿತವಾಗಿ ವರ್ತಿಸುತ್ತಿರುವ ನಗರದ ಮೆಟ್ರೋ ಕ್ಯಾಶ್ ಆ್ಯಂಡ್ ಕ್ಯಾರಿ ಆಡಳಿತ ವರ್ಗದ ಧೋರಣೆ ವಿರೋಧಿಸಿ ಇದೇ 19ರಂದು ಬಹುರಾಷ್ಟ್ರೀಯ ಕಂಪೆನಿಗಳೇ ಭಾರತಬಿಟ್ಟು ತೊಲಗಿ ಎಂಬ ಆಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಟ್ರೇಡ್ ಯೂನಿಯನ್ ಕೋ ಆರ್ಡಿನೇಷನ್ ಸೆಂಟರ್‍ನ ಅಧ್ಯಕ್ಷ ಜಿ.ಆರ್.ಶಿವಶಂಕರ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜರ್ಮನಿ ಮೂಲದ ಮಟ್ರೋ ಕ್ಯಾಶ್ ಆ್ಯಂಡ್ ಕ್ಯಾರಿ ಸಂಸ್ಥೆ ಜಾಗತಿಕವಾಗಿ 30 ರಾಷ್ಟ್ರಗಳಲ್ಲಿ 560 ಮಳಿಗೆಗಳನ್ನು ಒಳಗೊಂಡಿದೆ.

ಭಾರತದಲ್ಲಿ24 ಶಾಖೆಗಳನ್ನು ಹೊಂದಿದ್ದು, ಬೆಂಗಳೂರಿನಲ್ಲಿ 6 ಮಳಿಗೆಗಳಿವೆ. ಇಲ್ಲಿ ಸುಮಾರು ನಾಲ್ಕೂವರೆ ಸಾವಿರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ಶೇ.20ರಷ್ಟು ಮಾತ್ರ ಖಾಯಂ ನೌಕರರಿದ್ದು, ಉಳಿದವರು ದಿನಗೂಲಿ ನೌಕರರಾಗಿದ್ದಾರೆ. ಅವರಿಗೆ 14ಸಾವಿರಕ್ಕೂ ಕಡಿಮೆ ವೇತನ ನೀಡಲಾಗುತ್ತಿದೆ. ಇದರ ಜತೆಗೆ ಅನಗತ್ಯ ಕಿರುಕುಳ ನೀಡಲಾಗುತ್ತಿದೆ. ಕಾರ್ಮಿಕರ ವಿರುದ್ಧ 39ಕ್ಕೂ ಹೆಚ್ಚು ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಿದ್ದಾರೆ ಎಂದು ಆರೋಪಿಸಿದರು.
ಮೆಟ್ರೋ ಕ್ಯಾಶ್ ಆ್ಯಂಡ್ ಕಾರಿ ಆಡಳಿತ ಮಂಡಳಿಯ ಪರವಾಗಿ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರು ಕೋರ್ಟ್‍ಗೆ ಹಾಜರಾಗಿ ವಕಾಲತ್ತು ವಹಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಕಾರ್ಮಿಕರ ಮೇಲೆ ಆಗುತ್ತಿರುವ ದೌರ್ಜನ್ಯ ಕಡೆಗಣಿಸಿದೆ. ಈ ಹಿನ್ನೆಲೆಯಲ್ಲಿ ಜೂ.19ರಂದು ಬೆಳಗ್ಗೆ 11 ಗಂಟೆಗೆ ಟೌನ್‍ಹಾಲ್ ಮುಂದೆ ಬಹುರಾಷ್ಟ್ರೀಯ ಕಂಪೆನಿಗಳೇ ಭಾರತ ಬಿಟ್ಟು ತೊಲಗಿ ಎಂಬ ಆಂದೋಲನ ನಡೆಸುತ್ತಿರುವುದಾಗಿ ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin