ಯಡಿಯೂರಪ್ಪನವರ ಗೊಡ್ಡು ಬೆದರಿಕೆಗೆ ನಾನು ಹೆದರಲ್ಲ : ಸಿಎಂ ಸಿದ್ದರಾಮಯ್ಯ ತಿರುಗೇಟು

ಈ ಸುದ್ದಿಯನ್ನು ಶೇರ್ ಮಾಡಿ
ಮೈಸೂರಲ್ಲಿ ಟ್ರಿಣ್ ಟ್ರಿಣ್ ಸೈಕಲ್ ಯೋಜನೆ ಉದ್ಘಾಟಿಸಿದ ನಂತರ ಸೈಕಲ್ ಓಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮೈಸೂರಲ್ಲಿ ಟ್ರಿಣ್ ಟ್ರಿಣ್ ಸೈಕಲ್ ಯೋಜನೆ ಉದ್ಘಾಟಿಸಿದ ನಂತರ ಸೈಕಲ್ ಓಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು,ಜೂ.4-ರೈತರ ಸಾಲಮನ್ನಾ ಮಾಡಲು ನಿರ್ಧರಿಸಿರುವುದಾಗಿ ನಾನು ಎಲ್ಲೂ ಹೇಳಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಗೊಡ್ಡು ಬೆದರಿಕೆಗಳಿಗೆ ನಾನು ಬಗ್ಗುವುದಿಲ್ಲ, ಬೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ. ನಗರದಲ್ಲಿ ಇಂದು ಟ್ರಿಣ್ ಟ್ರಿಣ್ ಸೈಕಲ್ ಯೋಜನೆ ಉದ್ಘಾಟಿಸಿದ ನಂತರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡಿದರೆ ನಾನು ಮಾಡುತ್ತೇನೆ ಎಂದಷ್ಟೇ ಹೇಳಿದ್ದೇನೆ ಎಂದು ಪುನರುಚ್ಚರಿಸಿದರು.ವಿಧಾನಸೌಧಕ್ಕೆ, ಮುಖ್ಯಮಂತ್ರಿ ನಿವಾಸಕ್ಕೆ ಮುತ್ತಿಗೆ ಹಾಕುತ್ತೇನೆ. ಮೂಗು ಹಿಡಿಯುತ್ತೇನೆ ಎಂಬಂತಹ ಯಡಿಯೂರಪ್ಪನವರ ಪೆÇಳ್ಳು ಗುಡುಗಿಗೆ ನಾನು ಅಂಜುವುದಿಲ್ಲ ಎಂದು ಹೇಳಿದರು.   ರಾಜ್ಯ ರೈತರ ಸಾಲದಲ್ಲಿ ಕೇಂದ್ರ ಸರ್ಕಾರದ ಪಾಲು ಹೆಚ್ಚಿನ ಪ್ರಮಾಣದಲ್ಲಿದ್ದು , ನಾನು ಸಾಲಮನ್ನಾ ಮಾಡಿದರೂ ಕೂಡ ಅದರಿಂದ ರೈತರಿಗೆ ಯಾವುದೇ ಪ್ರಯೋಜನವೂ ಆಗುವುದಿಲ್ಲ. ಹಾಗಾಗಿ ನಾನು ಸಾಲಮನ್ನಾ ಮಾಡಲು ನಿರ್ಧರಿಸಿದ್ದೇನೆ ಎಂದು ಹೇಳಿಯೇ ಇಲ್ಲ. ಮಾಧ್ಯಮದವರ ತಪ್ಪು ಗ್ರಹಿಕೆಗಳಿಗೆ ನಾನು ಹೊಣೆಗಾರನಲ್ಲ ಎಂದು ಸ್ಪಷ್ಟಪಡಿಸಿದರು.

ರೈತರ ಮೇಲೆ ಯಡಿಯೂರಪ್ಪನವರಿಗೆ ಅಷ್ಟೊಂದು ಅಭಿಮಾನವಿದ್ದರೆ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರಮೋದಿ ಅವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಇರುವ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಲಿ. ಅದುಬಿಟ್ಟು ಇಲ್ಲಿ ಗುಡುಗು, ಮಿಂಚು ನಡೆಸಿದರೆ ಯಾವ ಉಪಯೋಗವೂ ಇಲ್ಲ ಎಂದು ಹೇಳಿದರು.

ಡಿಜಿಟಲ್ ಪ್ರಚಾರ ಫಲಕ:

ಇದಕ್ಕೂ ಮುನ್ನ ಇಲ್ಲಿನ ಕರ್ಜನ್ ಪಾರ್ಕ್‍ನಲ್ಲಿ ವಾರ್ತಾ ಇಲಾಖೆಯವರು ಸಿದ್ದಪಡಿಸಿರುವ ಸರ್ಕಾರದ ಸಾಧನೆಗಳನ್ನು ಬಿಂಬಿಸುವ ಡಿಜಿಟಲ್ ಪ್ರಚಾರ ಫಲಕ ಪ್ರದರ್ಶನವನ್ನೂ ಮುಖ್ಯಮಂತ್ರಿ ಅವರು ಉದ್ಘಾಟಿಸಿದರು.   ಇದೇ ವೇಳೆ ಇತಿಹಾಸ ತಜ್ಞ ಪ್ರೊ.ನಂಜರಾಜ ಅರಸ್ ಅವರು ಬರೆದಿರುವ ಅವರ ಆತ್ಮಕಥೆ ಕೃತಿಯನ್ನು ಬಿಡುಗಡೆ ಮಾಡಿದರು.

ಮಾಲಾರ್ಪಣೆ:

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯ ಅಂಗವಾಗಿ ನಗರದ ಕೆ.ಆರ್.ವೃತ್ತದಲ್ಲಿರುವ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಗೆ ಸಿದ್ದರಾಮಯ್ಯ ಮಾಲಾರ್ಪಣೆ ಮಾಡಿದರು. ಈ ಸಂದರ್ಭ ಅವರೊಂದಿಗೆ ಸಚಿವ ರೋಷನ್ ಬೇಗ್, ಸಂಸದ ಧ್ರುವನಾರಾಯಣ ಮತ್ತಿತರರು ಹಾಜರಿದ್ದರು.

ಜನತಾದರ್ಶನ:

ಇಲ್ಲಿನ ಟಿ.ಕೆ.ಲೇಔಟ್‍ನ ತಮ್ಮ ನಿವಾಸದಲ್ಲಿ ಇಂದು ಬೆಳ್ಳಂಬೆಳಗ್ಗೆಯೇ ಜನತಾದರ್ಶನ ನಡೆಸಿ ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಸೂಚಿಸಿ ಸಮಸ್ಯೆಗಳನ್ನು ಬಗೆಹರಿಸಿದರು. ಇನ್ನುಳಿದ ಕೆಲ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸುವುದಾಗಿ ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin