ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು, ಮುಸುಕುಧಾರಿಗಳಿಂದ ಮಹಿಳೆ ಮೇಲೆ ಫೈರಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

Firing-Vijayapura--01

ವಿಜಯಪುರ, ಜೂ.4– ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಅಡವಿಹೊಸ್ತಿಯಲ್ಲಿದ್ದ ಒಂಟಿ ಮಹಿಳೆ ಮೇಲೆ ಬೈಕ್‍ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಗುಂಡು ಹಾರಿಸಿದ್ದಾರೆ. ಜಿಲ್ಲೆಯ ಇಂಡಿ ತಾಲ್ಲೂಕಿನ ಮಣಂಕಲಗಿ ಗ್ರಾಮದ ಅಡವಿಹೊಸ್ತಿಯ ಶೀಲವಂತಭಾಯಿ ಸತ್ಯಪ್ಪಕೋಳಿ (58) ಇವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.



ಎರಡು ಗುಂಡುಗಳು ಎಡಗಾಲು ತೊಡಗೆ ತಾಗಿದ್ದು ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ಸಂಜೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಜಳಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕ್ರಮಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin