ನಾಪತ್ತೆಯಾಗಿದ್ದ ಮೂವರು ಬಾಲಕರು ಕೆರೆಯಲ್ಲಿ ಶವವಾಗಿ ಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

Ballary-Boys

ಬಳ್ಳಾರಿ, ಜೂ.6- ನಾಪತ್ತೆಯಾಗಿದ್ದ ಮೂವರು ಬಾಲಕರು ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮಾರುತಿ (10), ಮಹಮ್ಮದ್ ಸುಭಾನಿ (7), ಗುರುರಾಜ್ (9) ಮೃತಪಟ್ಟವರು. ಕಳೆದ 4ರಂದು ಮೂವರು ಬಾಲಕರು ಮನೆಯಿಂದ ಆಟ ಆಡಲು ತೆರಳಿದ್ದರು. ಸಂಜೆಯಾದರೂ ಮನೆಗೆ ಬಾರದೆ ಇರುವುದರಿಂದ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದರು.



ಇಂದು ಬೆಳಗ್ಗೆ ಜಿಲ್ಲೆಯ ಸಂಡೂರು ತಾಲೂಕಿನ ಬಂಡ್ರಿ ಗ್ರಾಮದ ಕೆರೆಯಲ್ಲಿ ಬಾಲಕರ ಶವ ತೇಲುತ್ತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಅಗ್ನಿಶಾಮಕ ದಳದವರ ಸಹಾಯದಿಂದ ಮೂವರು ಬಾಲಕ ಶವಗಳನ್ನು ಹೊರತೆಗೆದಿದ್ದಸಾರೆ. ಆಟವಾಡಲು ನೀರಿನಲ್ಲಿ ಇಳಿದಾಗ ಮುಳುಗಿ ಸಾವನ್ನಪ್ಪಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.  ಕೂಡ್ಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin