ಜೂ.18ರಂದು ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

s-pRANAB-mUKHARJEE

ಬೆಂಗಳೂರು, ಜೂ.7-ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಜೂನ್ 18ರಂದು ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆಯಲಿದ್ದಾರೆ. ದೇವಿಯ ದರ್ಶನ ಪಡೆದ ಬಳಿಕ ರಾಷ್ಟ್ರಪತಿಗಳು ಕೃಷ್ಣಮಠಕ್ಕೂ ಭೇಟಿ ನೀಡುವರು. ತದನಂತರ ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರನ್ನು ಭೇಟಿ ಮಾಡಲಿದ್ದಾರೆ.  ಶ್ರೀ ಕ್ಷೇತ್ರ ಕೊಲ್ಲೂರಿಗೆ ಬರುವಂತೆ ಕ್ಷೇತ್ರದ ಶಾಸಕರು ಹಾಗೂ ಇಲ್ಲಿನ ಧಾರ್ಮಿಕ ಮುಖಂಡರು ಕೂಡ ಮನವಿ ಮಾಡಿಕೊಂಡಿದ್ದಾರೆ.



ಮೂಲಗಳ ಪ್ರಕಾರ ಜೂ.18ರಂದು ದೆಹಲಿಯಿಂದ ವಿಶೇಷ ವಿಮಾನದಲ್ಲಿ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ರಾಷ್ಟ್ರಪತಿಗಳು ಬಳಿಕ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಆಗಮಿಸಿ ಸಂಜೆ 4.45ಕ್ಕೆ ಶ್ರೀದೇವಿಯ ದರ್ಶನ ಪಡೆಯಲಿದ್ದಾರೆ. ಈಗಾಗಲೇ ರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಅಗತ್ಯ ಸಿದ್ದತೆಗಳನ್ನು ಕೈಗೊಂಡಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin