ಬಾಬ್ರಿ ಮಸೀದಿ ಧ್ವಂಸ ಪ್ರಕರಣ : ಅಡ್ವಾಣಿ, ಉಮಾ, ಜೋಷಿ ಖುದ್ದು ಹಾಜರಾತಿಗೆ ವಿನಾಯ್ತಿ

ಈ ಸುದ್ದಿಯನ್ನು ಶೇರ್ ಮಾಡಿ

Advani-Babri--01

ನವದೆಹಲಿ,ಜೂ.7- ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ವಿಶೇಷ ನ್ಯಾಯಾಲಯ, ಹಿರಿಯ ಬಿಜೆಪಿ ನಾಯಕರಾದ ಎಲ್.ಕೆ.ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಮತ್ತು ಕೇಂದ್ರ ಸಚಿವೆ ಉಮಾಭಾರತಿ ಅವರಿಗೆ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಿದೆ.  ಕಳೆದ ಮೇ 30ರಂದು ಸಿಬಿಐ ವಿಶೇಷ ನ್ಯಾಯಾಲಯ ಈ ಮೂವರು ನಾಯಕರು ಸೇರಿದಂತೆ ಒಟ್ಟು 12 ಜನರ ವಿರುದ್ಧ ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಒಳಸಂಚಿನ ಆರೋಪದಲ್ಲಿ ದೋಷಾರೋಪಪಟ್ಟಿ ಸಲ್ಲಿಸಿತ್ತು.



ಈ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಿರಿಯ ನಾಯಕರು ಹಾಜರಾಗಿದ್ದರು. ಬಿಜೆಪಿ ನಾಯಕರಾದ ವಿನಯರ್ ಕಟಿಯಾರ್, ವಿಶ್ವಹಿಂದು ಪರಿಷತ್‍ನ ವಿಷ್ಣು ಹರಿ ದಾಲ್ಮಿಯ ಮತ್ತು ಸಾದ್ವಿ ರೀತಾಂಬರ್ ಅವರು ಕೂಡ ವಿಚಾರಣೆಗೆ ಹಾಜರಾಗಿದ್ದರು.   ಈ ಮೊದಲು ವೈಯಕ್ತಿಕ ಹಾಜರಾತಿಯಿಂದ ವಿನಾಯ್ತಿ ನೀಡುವ ಪ್ರಶ್ನೆಯೆ ಇಲ್ಲ ಎಂದು ನ್ಯಾಯಾಧೀಶರು ತಿಳಿಸಿದರು. ಆದರೆ ಈಗ ಈ ಮೂವರು ಹಿರಿಯ ನಾಯಕರಿಗೆ ವಿನಾಯ್ತಿ ನೀಡಿದ್ದು ಉಳಿದವರು ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin