ಬೆಂಗಳೂರು ಹಾಕಿ ಕ್ರೀಡಾಂಗಣಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರು
ಬೆಂಗಳೂರು, ಜೂ.7-ಬೆಂಗಳೂರು ಹಾಕಿ ಕ್ರೀಡಾಂಗಣಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಮೀನುಗಾರಿಕೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ವಿಧಾನಪರಿಷತ್ನಲ್ಲಿಂದು ತಿಳಿಸಿದರು. ಪ್ರಶ್ನೋತ್ತರ ಕಲಾಪದಲ್ಲಿ ಎಸ್.ವೀಣಾ ಅಚ್ಚಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೊಡಗು ಜಿಲ್ಲೆಯಲ್ಲಿ ರುವ ಹಾಕಿ ಪ್ರತಿಭೆಗಳನ್ನು ಗುರುತಿಸಿ, ಪ್ರೊತ್ಸಾಹಿಸಿ ತರಬೇತಿಗೊಳಿಸಿ ಅರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳುವಂತೆ ಮಾಡಲು ಸರ್ಕಾರ ಹಲವು ಕಾರ್ಯ ಕ್ರಮ ರೂಪಿಸಿದೆ.
ಜಿಲ್ಲೆಯಲ್ಲಿರುವ ಪ್ರತಿಭಾವಂತ ಹಾಕಿ ಕ್ರೀಡಾಪಟುಗಳಿಗೆ ಜಾಗತಿಕ ಮಟ್ಟದ ಕ್ರೀಡಾ ಸವಲತ್ತು ಒದಗಿಸುವ ಸಲುವಾಗಿ ಹಾಕಿ ಟರ್ಫ್ಗಳನ್ನು ವಿರಾಜಪೇಟೆ, ಸೋಮವಾರಪೇಟೆಗಳಲ್ಲಿ ಅಳವಡಿಸಲಾಗುತ್ತಿದೆ ಎಂದು ಅವರು ಹೇಳಿದರು. ಮೂರು ಕ್ರೀಡಾ ವಸತಿ ಶಾಲೆಗಳನ್ನು ಆರಂಭಿಸಲಾಗಿದೆ ಎಂದರು.
< Eesanje News 24/7 ನ್ಯೂಸ್ ಆ್ಯಪ್ >
Click Here to Download : Android / iOS
Facebook Comments