ಅಕ್ರಮ ಚಿನ್ನ ಸಾಗಣೆ : ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Mangalore--001

ಮಂಗಳೂರು, ಜೂ.8- ಇಲ್ಲಿನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಇಬ್ಬರು ಸಿಕ್ಕಿಬಿದಿದ್ದು 1 ಕೆಜಿ 247 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.   ದೀಪಕ್ ಇಂದರ್‍ಲಾಲ್ ಹಾಗೂ ನಿರ್ಮಲ ದಾಸ್ ಬಂಧಿತರು. ಇಂದು ಆರೋಪಿಗಳು ವಿಮಾನದ ಮೂಲಕ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದಿಳಿದಿದ್ದಾರೆ. ಈ ವೇಳೆ ಕಸ್ಟಮ್ಸ್ ಅಧಿಕಾರಿಗಳ ತಪಾಸಣೆ ವೇಳೆ ತಾವು ಧರಿಸಿದ್ದ ಬಟ್ಟೆಯೊಳಗೆ 1 ಕೆಜಿ 247 ಗ್ರಾಂ ಚಿನ್ನ ಪತ್ತೆಯಾಗಿದೆ.   ಬಂಧಿತ ಆರೋಪಿಗಳನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin