ಗಡಿಯಲ್ಲಿ ಒಳನುಸುಳಲು ಯತ್ನಿಸಿದ ಇಬ್ಬರು ಉಗ್ರರ ಹತ್ಯೆ, ಯೋಧ ಹುತಾತ್ಮ

ಈ ಸುದ್ದಿಯನ್ನು ಶೇರ್ ಮಾಡಿ

Border-Firing--01

ಶ್ರೀನಗರ, ಜೂ.8-ಕಾಶ್ಮೀರ ಕಣಿವೆಯಲ್ಲಿ ಉಗ್ರರ ಒಳನುಸುಳುವಿಕೆ ಇಳಿಮುಖವಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿಕೆಗೆ ವ್ಯತಿರಿಕ್ತವಾಗಿ ಭಯೋತ್ಪಾದಕ ಚಟುವಟಿಕೆಗಳು ತೀವ್ರಗೊಂಡಿದೆ. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ನೌಗಾಮ್ ವಲಯದ ಗಡಿ ನಿಯಂತ್ರಣ ರೇಖೆ (ಎಲ್‍ಒಸಿ) ಬಳಿ ಇಂದು ಉಗ್ರರ ಒಳನುಸುಳುವಿಕೆಯನ್ನು ಭಾರತೀಯ ಸೇನಾಪಡೆ ವಿಫಲಗೊಳಿಸಿ ಇಬ್ಬರನ್ನು ಹೊಡೆದುರುಳಿಸಿದೆ. ಈ ಕಾರ್ಯಾಚರಣೆಯಲ್ಲಿ ಯೋಧನೊಬ್ಬ ಹುತಾತ್ಮನಾಗಿದ್ದಾನೆ.ಕಾಶ್ಮೀರದಲ್ಲಿ ಕಳೆದ 24 ಗಂಟೆಗಳಲ್ಲಿ ಭಯೋತ್ಪಾದಕರ ಒಳನುಸುಳುವಿಕೆಯನ್ನು ಸೇನೆ ವಿಫಲಗೊಳಿಸಿದ ಎರಡನೇ ಪ್ರಕರಣ ಇದಾಗಿದ್ದು, 15 ದಿನಗಳಲ್ಲಿ ಇಂಥ ನಾಲ್ಕು ಅತಿಕ್ರಮಣ ಪ್ರಕರಣಗಳು ನಡೆದಿವೆ.   ನೌಗಾಮ್ ವಲಯದಲ್ಲಿ ಮತ್ತೊಂದು ಒಳನುಸುಳುವಿಕೆ ಯತ್ನವನ್ನು ಯೋಧರು ಯಶಸ್ವಿಯಾಗಿ ವಿಫಲಗೊಳಿಸಿ, ಇಬ್ಬರು ಭಯೋತ್ಪಾದಕರನ್ನು ಕೊಂದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಯೋಧನೊಬ್ಬ ಹುತಾತ್ಮನಾಗಿದ್ದಾನೆ ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಪ್ರದೇಶದಲ್ಲಿರಬಹುದಾದ ಉಗ್ರರಿಗಾಗಿ ವ್ಯಾಪಕ ಶೋಧ ಮುಂದುವರಿದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin