ಮಧ್ಯಪ್ರದೇಶದ ಮಂಡಸೌರ್ ಇನ್ನೂ ಪ್ರಕ್ಷುಬ್ಧ, ಎಸ್‍ಪಿ,ಡಿಸಿ ಎತ್ತಂಗಡಿ, ರಾಹುಲ್’ಗೆ ತಡೆ

ಈ ಸುದ್ದಿಯನ್ನು ಶೇರ್ ಮಾಡಿ

Rahul-Gandhi--0014

ಭೋಪಾಲ್ ,ಜೂ.8- ಮಧ್ಯಪ್ರದೇಶದ ಮಂಡಸೌರ್ ನಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವುದರಿಂದ ಶಾಂತಿ ಕಾಪಾಡುವ ಸಲುವಾಗಿ 1,100 ಕ್ಷಿಪ್ರ ಕಾರ್ಯಾಚರಣೆ( ಆರ್‍ಎಎಫ್) ಪಡೆಯನ್ನು ನಿಯೋಜಿಸಲಾಗಿದೆ. ಬೆಳೆಗಳಿಗೆ ಸೂಕ್ತ ಬೆಲೆ, ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಗೆ ಆಗ್ರಹಿಸಿ ಮಧ್ಯಪ್ರದೇಶದ ರೈತರು ಪ್ರತಿಭಟನೆ ನಡೆಸುತ್ತಿದ್ದರು. ಈ  ವೇಳೆ ಘರ್ಷಣೆ ಏರ್ಪಟ್ಟ ಕಾರಣ ಪೊಲೀಸರು ಗೋಲಿಬಾರ್ ನಡೆಸಿದ್ದರು. ಘರ್ಷಣೆ ಹಿಂಸಾಚಾರಕ್ಕೆ ತಿರುಗಿ ಐವರು ರೈತರು ಮೃತಪಟ್ಟಿದ್ದರು.ಇದರಿಂದ ಮಂಡ್‍ಸೌರ್‍ನಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ನಿನ್ನೆ ಕೂಡ ರೈತರು ತೀವ್ರವಾಗಿ ಪ್ರತಿಭಟನೆ ನಡೆಸಿದ್ದರು. ರಸ್ತೆಯಲ್ಲಿದ್ದ ಬಸïಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ್ದ ಅಲ್ಲಿನ ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿತ್ತು. ಕೇಂದ್ರ ಗೃಹ ಸಚಿವಾಲಯ ಕೂಡ ಕೂಡಲೇ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಅಲ್ಲದೆ, ಶಾಂತಿ ಕಾಪಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿತ್ತು.

ಡಿಸಿ-ಎಸ್ಪಿ ವರ್ಗಾವಣೆ:

ಮಂಡ್‍ಸೌರ್ ನಲ್ಲಿ ಗಲಭೆ ಹಿಂಸಾಚಾರಕ್ಕೆ ತಿರುಗಿದ್ದು ಇದನ್ನು ನಿಯಂತ್ರಿಸುವಲ್ಲಿ ವಿಫಲರಾಗಿದ್ದ ಜಿಲ್ಲಾಧಿಕಾರಿ ಸ್ವತಂತ್ರ ಕುಮಾರ್ ಸಿಂಜಗ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಒ.ಪಿ ಶ್ರೀ ವಾಸ್ತವ್ ಎಂಬವರನ್ನು ಸರಕಾರ ವರ್ಗಾವಣೆ ಮಾಡಿ ಆದೇಶ ನೀಡಿದೆ.

ರಾಹುಲ್ ಗಾಂಧಿಗೆ ತಡೆ:

ಹಿಂಸಾಚಾರ ಪಡೆದಿರುವ ಮಂಡ್‍ಸೌರ್ ಗಲಭೆಯಲ್ಲಿ ಮೃತಪಟ್ಟ ಐವರು ರೈತರ ಕುಟುಂಬಗಳಿಗೆ ಸಾಂತ್ವಾನ ಹೇಳಲು ಆಗಮಿಸುತ್ತಿರುವ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಪ್ರವೇಶಕ್ಕೆ ಇಲ್ಲಿನ ಸರ್ಕಾರ ಅನುಮತಿ ನಿರಾಕರಿಸಿದ್ದು, ಗಲಭೆ ಪ್ರದೇಶಕ್ಕೆ ಬರದಂತೆ ಸೂಚಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin