ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳ ನೆಲಸಮ ಮಾಡಲು ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

Tanveer-Sait

ಬೆಂಗಳೂರು,ಜೂ.9-ರಾಜ್ಯದಲ್ಲಿ ಶಿಥಿಲಾವಸ್ಥೆಯಲ್ಲಿರುವ 36 ಸಾವಿರ ಶಾಲಾ ಕೊಠಡಿಗಳನ್ನು ನೆಲಸಮ ಮಾಡಲು ಆದೇಶಿಸಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ವಿಧಾನಪರಿಷತ್‍ನಲ್ಲಿ ತಿಳಿಸಿದರು.   ಪ್ರಶ್ನೋತ್ತರ ಕಲಾಪದಲ್ಲಿ ಜೆಡಿಎಸ್ ಸದಸ್ಯ ಟಿ.ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಶಿಥಿಲಾವಸ್ಥೆಯಲ್ಲಿರುವ ಶಾಲಾ ಕೊಠಡಿಗಳನ್ನು ನೆಲಸಮ ಮಾಡಿ ಉಳಿದ ಕೊಠಡಿಗಳನ್ನು ದುರಸ್ತಿ ಮಾಡಲು ತೀರ್ಮಾನಿಸಲಾಗಿದ್ದು, ಇದಕ್ಕೆ ಶಾಸಕರ ಅನುದಾನ ಬಳಕೆ ಮಾಡಿಕೊಳ್ಳಲಾಗುವುದು ಎಂದರು.ಶಿಕ್ಷಣ ಕ್ಷೇತ್ರಕ್ಕೆ ಈ ವರ್ಷ 18,266 ಕೋಟಿ ರೂ. ಅನುದಾನವಿದ್ದು ಬಹುತೇಕ ವೇತನಕ್ಕೆ ವೆಚ್ಚವಾಗುತ್ತಿದೆ. ಪ್ರತಿ ಶಾಲೆಗಳಿಗೂ ನಿರ್ಮಾಣ ವೆಚ್ಚ ನೀಡುತ್ತಿದ್ದೇವೆ. 2017-18ನೇ ಸಾಲಿಗೆ ಸರ್ಕಾರಿ ಶಾಲೆಗಳ ದುರಸ್ತಿ ಹಾಗೂ ಶಿಥಿಲಿಗೊಂಡ ಕೊಠಡಿಯನ್ನು ಮರುನಿರ್ಮಿಸಲು 153.41 ಕೋಟಿ ರೂ.ಗಗಳನ್ನು ನಿಗದಿಗೊಳಿಸಲಾಗಿದೆ ಎಂದು ಅವರು ಹೇಳಿದರು.   43,185 ಪ್ರಾಥಮಿಕ ಶಾಲೆಗಳು ಸ್ವಂತ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, 4486 ಪ್ರೌಢಶಾಲೆಗಳು ಸ್ವಂತ ಕಟ್ಟಡಗಳನ್ನು ಹೊಂದಿವೆ ಎಂದು ಸದಸ್ಯರ ಮತ್ತೊಂದು ಪ್ರಶ್ನೆಗೆ ಸಚಿವರು ಉತ್ತರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin