ಸರ್ಕಾರಿ ಸೌಲಭ್ಯ ಪಡೆಯಲು ಆಧಾರ್ ಕಡ್ಡಾಯ

ಈ ಸುದ್ದಿಯನ್ನು ಶೇರ್ ಮಾಡಿ

adhar

ಮೈಸೂರು,ಜೂ.9-ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಯ ಸೌಲಭ್ಯ ಪಡೆಯಲು ಆಧಾರ್‍ಕಾರ್ಡ್ ಕಡ್ಡಾಯ ಎಂದು ಜಿಲ್ಲಾಧಿಕಾರಿ ರಂದೀಪ್ ತಿಳಿಸಿದರು. ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರೊಂದಿಗೆ ಆಧಾರ್ ನೋಂದಣಿ ಕುರಿತು ಆಯೋಜಿಸಲಾದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಯೋಜನೆಗಳನ್ನು ಪಡೆಯಲು ಆಧಾರ್ ಕಡ್ಡಾಯ ಮಾಡಿದೆ. ಮುಂದಿನ ಎರಡು ವರ್ಷಗಳಲ್ಲಿ ಎಲ್ಲ ಯೋಜನೆಗಳ ಸೌಲಭ್ಯ ಪಡೆಯಲು ಆಧಾರ್‍ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯ ಎಂದರು.


ಇ-ಆಡಳಿತ ಯೋಜನೆಯ ವ್ಯವಸ್ಥಾಪಕ ರವಿಕುಮಾರ್ ಮಾತನಾಡಿ, ರಾಜ್ಯದಲ್ಲಿ 6.46 ಕೋಟಿ ಜನಸಂಖ್ಯೆ ಇದ್ದು , ಇದರಲ್ಲಿ 6.1 ಕೋಟಿ ಮಂದಿ ಆಧಾರ್‍ಕಾರ್ಡ್ ಗುರುತಿನ ಚೀಟಿ ಪಡೆದುಕೊಂಡಿದ್ದಾರೆ. ತಾಂತ್ರಿಕ ಸಮಸ್ಯೆಯಿಂದ ಉಳಿದ 37 ಲಕ್ಷ ಜನರಿಗೆ ಆಧಾರ್‍ಕಾರ್ಡ್ ದೊರೆತಿಲ್ಲ. ಮುಂಬರುವ ದಿನಗಳಲ್ಲಿ ಎಲ್ಲರಿಗೂ ಪೂರೈಸಲಾಗುವುದು, ಮೈಸೂರಿನಲ್ಲಿ 99.4ರಷ್ಟು ನೋಂದಣಿಯಾಗಿದೆ ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin