ಪಾರ್ವತಮ್ಮ ರಾಜ್ ಕುಮಾರ್ ಮನೆಗೆ ರಾಹುಲ್ ಭೇಟಿ, ಕುಟುಂಬದವರಿಗೆ ಸಾಂತ್ವಾನ

ಈ ಸುದ್ದಿಯನ್ನು ಶೇರ್ ಮಾಡಿ

Parvatamma

ಬೆಂಗಳೂರು. ಜೂ. 12: ವರನಟ ಡಾ. ರಾಜಕುಮಾರ್ ಅವರ ಧರ್ಮಪತ್ನಿ ಪಾರ್ವತಮ್ಮ ರಾಜಕುಮಾರ್ ನಿಧನದ ಹಿನ್ನೆಲೆಯಲ್ಲಿ ಸದಾಶಿವನಗರದಲ್ಲಿರುವ ಪಾರ್ವತಮ್ಮ ಅವರ ನಿವಾಸಕ್ಕೆ ರಾಷ್ಟ್ರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಮುಖ್ಯಮಂತ್ರಿ ಸೇರಿ ರಾಜ್ಯದ ಪ್ರಮುಖ ನಾಯಕರೊಂದಿಗೆ ಭೇಟಿ ನೀಡಿ ರಾಜ್ ಕುಮಾರ್ ಕುಟುಂಬಕ್ಕೆ ಸಾಂತ್ವನ ಹೇಳಿದರು.


ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಪಾರ್ವತಮ್ಮ ರಾಜ್ ಕುಮಾರ್ ಅವರು ಇತ್ತೀಚಿಗೆ ನಿಧನಹೊಂದಿದ್ದರು. ಕಾಂಗ್ರೆಸ್ ಪಕ್ಷದ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಮರುಚಾಲನೆ ನೀಡಲು ಬೆಂಗಳೂರಿಗೆ ಆಗಮಿಸಿದ್ದ ರಾಹುಲ್ ಗಾಂಧೀ ಮುಖ್ಯಮಂತ್ರಿ ಸಿದ್ದರಾಮಯ್ಯ , ಪರಮೇಶ್ವರ್, ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರರೊಂದಿಗೆ ಪಾರ್ವತಮ್ಮನವರ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿ, ಕುಟುಬದವರಲ್ಲಿ ಧೈರ್ಯ ತುಂಬಿದರು.  ಈ ಸಂಧರ್ಭದಲ್ಲಿ ಪುತ್ರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಸೇರಿದಂತೆ ಕುಟುಂಬಸ್ಥರು ಇದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin