1 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆ ತಲುಪಿಸುವ ಗುರಿ

ಈ ಸುದ್ದಿಯನ್ನು ಶೇರ್ ಮಾಡಿ

Anjaneya-Session

ಬೆಂಗಳೂರು,ಜೂ.12-ವಿದ್ಯಾಸಿರಿ ಯೋಜನೆಯನ್ನು ಪ್ರಸಕ್ತ ಸಾಲಿನಲ್ಲಿ ಒಂದು ಲಕ್ಷ ವಿದ್ಯಾರ್ಥಿಗಳಿಗೆ ತಲುಪಿಸುವ ಗುರಿ ಹಮ್ಮಿಕೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಸಚಿವ ಎಚ್.ಆಂಜನೇಯ ವಿಧಾನಪರಿಷತ್‍ಗೆ ತಿಳಿಸಿದರು.  ಪ್ರಶ್ನೋತ್ತರ ಕಲಾಪದಲ್ಲಿ ಬಿ.ಜೆ.ಪುಟ್ಟಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಡ ಹಾಗೂ ಹಿಂದುಳಿದ ವರ್ಗಗಳು ಮತ್ತು ಶೋಷಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾಸಿರಿ ಯೋಜನೆಯನ್ನು ಜಾರಿಗೆಗೊಳಿಸಿದ್ದು , ಈಗಾಗಲೇ ಎರಡೂವರೆ ಲಕ್ಷ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಒಂದೂವರೆ ಸಾವಿರ ರೂ.ಗಳನ್ನು ನೇರವಾಗಿ ಆರ್‍ಟಿಜಿಎಸ್ ಮೂಲಕ ಅವರ ಖಾತೆಗೆ ಜಮಾ ಮಾಡಲಾಗುತ್ತಿದೆ.ಅದೇ ರೀತಿ ಪ್ರಸಕ್ತ ಸಾಲಿನಲ್ಲಿ ಇನ್ನು ಒಂದು ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ವಿವಿಧ ಹಿಂದುಳಿದ ವರ್ಗಗಳು ಹಾಗೂ ಇತರರು ನಡೆಸುವ ಹಾಸ್ಟೆಲ್‍ಗೆ ಅನುದಾನ ನೀಡಲು ಎರಡು ವರ್ಷ ಮಾನದಂಡ ವಿಧಿಸಲಾಗಿದೆ. ಖಾಸಗಿ ಸಂಸ್ಥೆಯವರು ಆರ್ಥಿಕವಾಗಿ ಸದೃಢವಾಗಿದ್ದು ವಿದ್ಯಾರ್ಥಿ ನಿಲಯವನ್ನು ಅನುದಾನಕ್ಕೆ ಒಳಪಡಿಸುವ ಮುನ್ನ ಎರಡು ವರ್ಷ ಕಾಲ ತೃಪ್ತಿಕರವಾಗಿ ವಿದ್ಯಾರ್ಥಿ ನಿಲಯವನ್ನು ನಡೆಸಬೇಕಾಗುತ್ತದೆ. ಆಗ ಅನುದಾನಕ್ಕೆ ಒಳಪಡಿಸಲಾಗುವುದು ಎಂದು ಸಚಿವರು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin