ಪೊಲೀಸ್ ಇಲಾಖೆ ನೇಮಕಾತಿಯಲ್ಲಿ ಏಕಗವಾಕ್ಷಿ ಪದ್ಧತಿ ತರಲು ಚಿಂತನೆ

ಈ ಸುದ್ದಿಯನ್ನು ಶೇರ್ ಮಾಡಿ

Parameshwar--01

ಬೆಂಗಳೂರು, ಜೂ.13-ರಾಜ್ಯದ ಪೊಲೀಸ್‍ಇಲಾಖೆಯ ನೇಮಕಾತಿಯಲ್ಲಿ ಏಕಗವಾಕ್ಷಿ ಪದ್ಧತಿ ಜಾರಿಗೆ ತರುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ವಿಧಾನಸಭೆಗೆ ತಿಳಿಸಿದ್ದಾರೆ.  ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಸಂಜಯ್ ಬಿ.ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಏಕಗವಾಕ್ಷಿ ಪದ್ಧತಿ ಜಾರಿಗೆ ತರುವ ಸಂಬಂಧ ಪರಿಶೀಲಿಸಿ ವರದಿ ನೀಡಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿ ವರದಿ ಬಂದ ನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದರು.


ತಮಿಳುನಾಡು, ಆಂಧ್ರಪ್ರದೇಶದಲ್ಲಿ ಈ ಪದ್ಧತಿ ಇದೆ. ನೇಮಕಾತಿ ಸಮಿತಿಯು ನಾಲ್ಕೈದು ರಾಜ್ಯಗಳ ನೇಮಕಾತಿ ಪರಿಶೀಲಿಸುತ್ತಿದೆ ಎಂದರು.
ನಮ್ಮ ರಾಜ್ಯದಲ್ಲಿ ಕೆಎಸ್‍ಆರ್‍ಪಿ, ಡಿಎಆರ್, ಸಿವಿಲ್ ಸಿಬ್ಬಂದಿ ನೇಮಕಕ್ಕೆ ಬೇರೆ, ಬೇರೆ ನೇಮಕಾತಿ ಹಾಗೂ ಕೇಡರ್‍ಗಳಿವೆ. ಕೆಎಸ್‍ಆರ್‍ಪಿಯಿಂದ ಸಿವಿಲ್ ಸೇವೆಗೆ ಬರಲು ಈಗಿನ ನಿಯಮಾವಳಿಗಳಲ್ಲಿ ಕಷ್ಟವಾಗುತ್ತಿದೆ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin