ರಸ್ತೆ ಬದಿಯಲ್ಲಿ ಮಲಗಿದ್ದವನ ಮರ್ಮಾಂಗಕ್ಕೆ ಬೆಂಕಿಯಿಟ್ಟ ಕಿಡಿಗೇಡಿಗಳು..!

ಈ ಸುದ್ದಿಯನ್ನು ಶೇರ್ ಮಾಡಿ

Fire--01

ಚೆನ್ನೈ, ಜೂ.13-ರಸ್ತೆ ಬದಿ ಮಲಗಿದ್ದ ವ್ಯಕ್ತಿಯ ಮರ್ಮಾಂಗಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ವಿಚಿತ್ರ ಘಟನೆ ಚೆನ್ನೈನ ಕೋಡಂಬಕ್ಕಂನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಜಾಫರ್(50) ಎಂಬಾತ ರಂಗರಾಜಪುರಂನಲ್ಲಿರುವ ಇಂಡಿಯಾ ಬ್ಯಾಂಕ್ ಬಳಿ ಮಲಗಿದ್ದರು. ಮಧ್ಯರಾತ್ರಿಯಲ್ಲಿ ಕೆಲವು ದುಷ್ಕರ್ಮಿಗಳು ಕುಡಿದ ಅಮಲಿನಲ್ಲಿ ಮಲಗಿದ್ದ ಜಾಫರ್ ಮರ್ಮಾಂಗಕ್ಕೆ ಬೆಂಕಿ ಹಚ್ಚಿದ್ದಾರೆ. ಘಟನೆಯಲ್ಲಿ ಆತ ತೀವ್ರ ನೋವು ಅನುಭವಿಸಿದ್ದಾರೆ. ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin