ಸಿಆರ್‍ಪಿಎಫ್ ಶಿಬಿರದ ಮೇಲೆ ಉಗ್ರರ ಗ್ರೇನೆಡ್ ದಾಳಿ. ಯೋಧರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

CRPF--01

ಶ್ರೀನಗರ, ಜೂ.13-ಜಮ್ಮು ಮತ್ತು ಕಾಶ್ಮೀರದಲ್ಲಿ ಯೋಧರ ಮೇಲೆ ಉಗ್ರರ ದಾಳಿ, ಭಯೋತ್ಪಾದಕರು ಅತಿಕ್ರಮಣ ಯತ್ನ ಮತ್ತು ಗಡಿಯಲ್ಲಿ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆ-ಅಪ್ರಚೋದಿತ ದಾಳಿ ದಿನನಿತ್ಯದ ಮಾಮೂಲಿ ಸುದ್ದಿಗಳಾಗಿವೆ. ಕೇಂದ್ರ ಸರ್ಕಾರದ ಹೇಳಿಕೆಗೆ ವ್ಯತಿರಿಕ್ತವಾಗಿ ಪಾಕ್ ಬೆಂಬಲಿತ ಉಗ್ರರ ಅಟ್ಟಹಾಸ ಮುಂದುವರಿದಿದೆ.   ಕಾಶ್ಮೀರ ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಸಿಆರ್‍ಪಿಎಫ್ ಶಿಬಿರದ ಮೇಲೆ ಭಯೋತ್ಪಾದಕರು ನಿನ್ನೆ ರಾತ್ರಿ ನಡೆಸಿದ ಗ್ರೇನೆಡ್ ದಾಳಿಯಲ್ಲಿ ಕೆಲವು ಯೋಧರಿಗೆ ಗಾಯಗಳಾಗಿವೆ.


ಆಕ್ರಮಣ ನಡೆಸಿ ಪರಾರಿಯಾದ ಉಗ್ರಗಾಮಿಗಳಿಗಾಗಿ ತೀವ್ರ ಶೋಧ ಮುಂದುವರಿದಿದೆ. ಈ ಕೃತ್ಯದ ನಂತರ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಮತ್ತೊಂದೆಡೆ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳುವಿಕೆ ಯತ್ನಗಳನ್ನು ವಿಫಲಗೊಳಿಸಿದ ಭದ್ರತಾಪಡೆಗಳು, ಪರಾರಿಯಾದ ಉಗ್ರರು ಬಿಟ್ಟು ಹೋದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಕಾಡತೂಸುಗಳು, ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin