ಗ್ರಾಮೀಣ ರಸ್ತೆ ದುರಸ್ತಿಗೆ 665 ಕೋಟಿ ರೂ. ಅನುದಾನ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

Roads

ಬೆಂಗಳೂರು,ಜೂ.14- ಗ್ರಾಮೀ ಣ ರಸ್ತೆ ದುರಸ್ತಿಗಾಗಿ 665 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಎಚ್.ಕೆ.ಪಾಟೀಲ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಪ್ರತಾಪ್‍ಗೌಡ ಪಾಟೀಲ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಪಡೆಗೆ ಈ ಹಣ ಬಿಡುಗಡೆ ಮಾಡಿದ್ದು , ರಸ್ತೆ ದುರಸ್ತಿಗೆ ಹೆಚ್ಚಿನ ಹಣ ಬಿಡುಗಡೆ ಮಾಡಲಾಗುವುದು ಎಂದರು.

ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಸಂಬಂಧಪಟ್ಟ ನಬಾರ್ಡ್‍ನಿಂದ 1500 ಕೋಟಿ ರೂ.ಗಳ ಬೇಡಿಕೆ ಸಲ್ಲಿಸಲಾಗಿತ್ತು. ಆದರೆ ಅದನ್ನು 850 ಕೋಟಿ ರೂ.ಗೆ ಇಳಿಕೆ ಮಾಡಲಾಗಿದೆ. ನಬಾರ್ಡ್ ಅನುದಾನವನ್ನು ಜಿಲ್ಲಾವಾರು ಹಂಚಿಕೆ ಮಾಡಿ ಬಿಡುಗಡೆ ಮಾಡಲಾಗಿದೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin