ಕೌಶಲ್ಯಾಭಿವೃದ್ಧಿ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರಿಂದ 73,501 ಅರ್ಜಿ ಸ್ವೀಕಾರ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-025

ಬೆಂಗಳೂರು, ಜೂ.15-ಕೌಶಲ್ಯಾಭಿವೃದ್ಧಿ ಯೋಜನೆಯಡಿಯಲ್ಲಿ ಅಲ್ಪಸಂಖ್ಯಾತರಿಂದ 73,501 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಪರಿಷತ್‍ಗೆ ತಿಳಿಸಿದರು. ಪ್ರಶ್ನೋತ್ತರ ಕಲಾಪದಲ್ಲಿ ಕೆ.ಅಬ್ದುಲ್‍ಜಬ್ಬಾರ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೌಶಲ್ಯಾಭಿವೃದ್ಧಿ ಯೋಜನೆಯಡಿ ಈ ವರ್ಷ 5 ಲಕ್ಷ ಯುವಕ-ಯುವತಿಯರಿಗೆ ವಿವಿಧ ಉದ್ಯೋಗಗಳ ತರಬೇತಿ ನೀಡಲು ನಿರ್ಧರಿಸಲಾಗಿದ್ದು, ಇದರಲ್ಲಿ ಅಲ್ಪಸಂಖ್ಯಾತರಿಗೆ ಶೇ.15ರಷ್ಟು ಮೀಸಲಿರಿಸಲಾಗಿದೆ ಎಂದರು. ಮೂರು ತಿಂಗಳು, ಐದು ತಿಂಗಳು ಹೀಗೆ ವಿವಿಧ ಉದ್ಯೋಗಗಳ ತರಬೇತಿ ನೀಡಿ ಉದ್ಯೋಗ ಮೇಳಗಳ ಮೂಲಕ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಲಾಗುವುದು, ಉದ್ಯೋಗ ಸಿಗದಿದ್ದರೆ ಬ್ಯಾಂಕುಗಳ ಮೂಲಕ ಸಾಲ ನೀಡಿ ಸ್ವಯಂ ಉದ್ಯೋಗ ಕಲ್ಪಿಸಲು ಅವಕಾಶ ನೀಡುವ ಉದ್ದೇಶ ಹೊಂದಲಾಗಿದೆ ಎಂದರು.

529 ಜಾಬ್ ರೋಲ್ಸ್‍ಗಳ ತರಬೇತಿ ನೀಡಲಾಗುವುದು. ಅನಕ್ಷರಸ್ಥರಿಗೂ ಕೂಡ ಉದ್ಯೋಗ ತರಬೇತಿ ನೀಡಿ ಬದುಕಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು. ಕೌಶಲ್ಯ ಕರ್ನಾಟಕ ಯೋಜನೆಯಡಿ ನೋಂದಣಿ ಅಭಿಯಾನ ಕಾರ್ಯಕ್ರಮ ಆರಂಭಿಸಿದ್ದು, ಅಭ್ಯರ್ಥಿಗಳನ್ನು ತರಬೇತಿ ಕೇಂದ್ರಗಳಲ್ಲಿ ನೋಂದಣಿ ಮಾಡಿಕೊಳ್ಳಳಾಗುತ್ತಿದೆ. ಇಡೀ ರಾಜ್ಯದಲ್ಲಿ ಎಲ್ಲ ಜಿಲ್ಲಾ ತರಬೇತಿ ಕೇಂದ್ರಗಳಿಗೆ ವೆಬ್‍ ಪೋಟ್ರಲ್ ಡಿಡಿಡಿ.hZ್ಠoeZ್ಝhZ್ಟ.್ಚಟಞನಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ. ತರಬೇತಿ ಮುಗಿದ ಮೇಲೆ ಅಭ್ಯರ್ಥಿಗಳಿಗೆ ಜಿಲ್ಲಾವಾರು ಉದ್ಯೋಗ ಮೇಳಗಳನ್ನು ಆಯೋಜಿಸಿ ಉದ್ಯೋಗ ಕಲ್ಪಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin