ಲಿಂಗಾಯತ ಧರ್ಮ ಘೋಷಣೆಗೆ ಸರ್ವಾನುಮತದ ಸಮ್ಮತಿ : ಜಯಚಂದ್ರ

ಈ ಸುದ್ದಿಯನ್ನು ಶೇರ್ ಮಾಡಿ

TB-Jayachandra

ಬೆಂಗಳೂರು, ಜೂ.15- ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮ ಎಂದು ಶಿಫಾರಸು ಮಾಡುವ ಬೇಡಿಕೆ ಹಿಂದಿನಿಂದಲೂ ಇತ್ತು. ಈಗಾಗಲೇ ಇದಕ್ಕೆ ಸರ್ವಾನುಮತದ ತೀರ್ಮಾನವೂ ಆಗಿದೆ ಎಂದು ಕಾನೂನು ಸಚಿವ ಟಿ.ಬಿ.ಜಯಚಂದ್ರ ತಿಳಿಸಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದಕ್ಕೆ ಪೂರಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಸ್ಪಂದಿಸಿದ್ದಾರೆ. ಇದರಲ್ಲಿ ರಾಜಕಾರಣವಿಲ್ಲ. ಆದರೆ, ಅಂತಿಮವಾಗಿ ತೀರ್ಮಾನ ಕೈಗೊಳ್ಳಬೇಕಿರುವುದು ಕೇಂದ್ರ ಸರ್ಕಾರ ಎಂದು ಹೇಳಿದರು. ಲಿಂಗಾಯತ ಧರ್ಮವನ್ನು ಸ್ವತಂತ್ರ ಧರ್ಮವೆಂದು ಘೋಷಿಸಬೇಕೆಂಬ ಬೇಡಿಕೆಗೆ ಸಮ್ಮತಿ ಇದೆ. ಆದರೆ, ಅದರ ನಿರ್ಧಾರ ಕೇಂದ್ರ ಸರ್ಕಾರದ ಕೈಯಲ್ಲಿದೆ ಎಂದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin