ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ : ಬಸವರಾಜ ಹೊರಟ್ಟಿ

ಈ ಸುದ್ದಿಯನ್ನು ಶೇರ್ ಮಾಡಿ

Basavaraj-Horatti

ಬೆಂಗಳೂರು,ಜೂ.15-ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ತಾವು ಬದ್ಧರಾಗಿರುವುದಾಗಿ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ವಿಧಾನಪರಿಷತ್ ಸಭಾಪತಿ ಸ್ಥಾನ ಕುರಿತಂತೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇಂತಹ ವಿಚಾರಗಳಲ್ಲಿ ವೈಯಕ್ತಿಕ ಅಭಿಪ್ರಾಯಕ್ಕೆ ಅವಕಾಶವಿಲ್ಲ ಎಂದರು.   ಪಕ್ಷದ ನಾಯಕರಾದ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿದ್ದೇನೆ. ಅದರಂತೆ ನಡೆದುಕೊಳ್ಳುತ್ತೇನೆ ಎಂದು ಚುಟುಕಾಗಿ ಉತ್ತರಿಸಿದರು.

ಟ್ರೈನ್ ಹೋದ ಮೇಲೆ ಟಿಕೆಟ್: ಕಾಂಗ್ರೆಸ್‍ನವರು ರೈಲು ಹೋದ ಮೇಲೆ ಟಿಕೆಟ್ ತೆಗೆದುಕೊಂಡಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಶರವಣ ಅಭಿಪ್ರಾಯಪಟ್ಟಿದ್ದಾರೆ. ಇಷ್ಟು ದಿನ ಸುಮ್ಮನಿದ್ದ ಕಾಂಗ್ರೆಸ್ ಈಗ ಏಕಾಏಕಿ ಅವಿಶ್ವಾಸ ನಿರ್ಣಯ ತಂದು ಪದಚ್ಯುತಿಗೆ ಮುಂದಾಗಿದೆ. ಇಷ್ಟು ದಿನ ಏಕೆ ಸುಮ್ಮನಿದ್ದರು ಎಂದು ಪ್ರಶ್ನಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin