ಕೊಲೆ ಬೆದರಿಕೆ : ಏಕಾಂಗಿಯಾಗಿ ಧರಣಿಗೆ ಕುಳಿತ ಶಿಕ್ಷಕ

ಈ ಸುದ್ದಿಯನ್ನು ಶೇರ್ ಮಾಡಿ

Teacher--01

ಕೆಆರ್ ಪೇಟೆ, ಜೂ.16- ಹೇಮಗಿರಿಯ ಕಲ್ಯಾಣ ವೆಂಕಟ ರಮಣಸ್ವಾಮಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಚಿಕ್ಕೇಗೌಡ ಅವರಿಗೆ ಹೇಮಗಿರಿ ಶಾಖಾ ಮಠದ ವ್ಯವಸ್ಥಾಪಕ ಜಿ.ಎನ್. ರಾಮಕೃಷ್ಣೇಗೌಡ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ಕೆಆರ್ ಪೇಟೆ ಪಟ್ಟಣದ ಬಿಜಿಎಸ್ ಶಿಕ್ಷಣ ಸಂಸ್ಥೆ ಆವರಣದಲ್ಲಿ ಏಕಾಂಗಿಯಾಗಿ ಧರಣಿ ಸತ್ಯಾಗ್ರಹ ನಡೆಸಿದರು.   ಶಿಕ್ಷಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕವಾಗಿ ಹಿಂಸೆ ನೀಡಿ ಸರ್ವಾಧಿಕಾರಿ ಧೋರಣೆಯಿಂದ ವರ್ತಿಸುತ್ತಿದ್ದಾರೆ. ಅಲ್ಲದೆ, ಪಟ್ಟಣದ ಜಯಮ್ಮ-ಶಿವಲಿಂಗೇಗೌಡ ಕಲ್ಯಾಣ ಮಂಟಪದ ಮುಂದೆ ನಿಂತಿದ್ದ ಸಂದರ್ಭದಲ್ಲಿ ಕಾರಿನಲ್ಲಿ ಬಂದ ರಾಮಕೃಷ್ಣೇಗೌಡರು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಚಿಕ್ಕೇಗೌಡ ಗಂಭೀರ ಆರೋಪ ಮಾಡಿದರು.

ಸಕಾರಣವಿಲ್ಲದೆ ನನ್ನನ್ನು ಬೇರೆಡೆಗೆ ವರ್ಗಾವಣೆ ಮಾಡಿ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ನನಗೆ ರಕ್ಷಣೆ ನೀಡಬೇಕು ಹಾಗೂ ನಾನು ಇಲ್ಲಿಯೇ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕು. ಒಕ್ಕಲಿಗರ ಸಾರ್ವಜನಿಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಶ್ರೀಮಠದ ಉನ್ನತಾಧಿಕಾರಿಗಳು ಮಧ್ಯ ಪ್ರವೇಶಿಸಿ ನನಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ಸ್ಥಳದಲ್ಲಿದ್ದ ಬಿಜಿಎಸ್ ಶಿಕ್ಷಣ ಸಂಸ್ಥೆ ಉಸ್ತುವಾರಿ ಅಧಿಕಾರಿ ಡಾ. ಯೋಗರಾಜ್ ಚಿಕ್ಕೇಗೌಡರನ್ನು ಸಮಾಧಾನ ಪಡಿಸಿ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸುವಂತೆ ಮನವಿ ಮಾಡಿದರೂ ಮುಖ್ಯಶಿಕ್ಷಕ ಚಿಕ್ಕೇಗೌಡ ಧರಣಿ ಮುಂದುವರಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin