ಪ್ರತಿಭಟನೆಗಿಳಿದ ಖಾಸಗಿ ಆಸ್ಪತ್ರೆಗಳ ವೈದ್ಯರು, ರೋಗಿಗಳ ನರಳಾಟ

ಈ ಸುದ್ದಿಯನ್ನು ಶೇರ್ ಮಾಡಿ

Doctors--001

ಬೆಂಗಳೂರು,ಜೂ.16-ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಖಾಸಗಿ ವೈದ್ಯಕೀಯ ತಿದ್ದುಪಡಿ ಕಾಯ್ದೆ 2017ನ್ನು ವಿರೋಧಿಸಿ ಇಂದು ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆಗಿಳಿದಿದ್ದರಿಂದ ರೋಗಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿ ಪರದಾಡುವಂತಾಯಿತು.
ಖಾಸಗಿ ಆಸ್ಪತ್ರೆಗಳ ವೈದ್ಯರು ಇದ್ದಕ್ಕಿದ್ದಂತೆ ಇಂದು ಬೆಳಗ್ಗೆಯಿಂದಲೇ ಪ್ರತಿಭಟನೆಗಿಳಿದಿದ್ದರಿಂದ ಆಸ್ಪತ್ರೆಗೆ ಬಂದಿದ್ದ ರೋಗಿಗಳು ದಿಕ್ಕು ತೋಚದಂತಾಗಿ ಪರದಾಡಿದರು.

ರಾಜ್ಯ ಸರ್ಕಾರ ಜಾರಿಗೆ ತರುತ್ತಿರುವ ಈ ಹೊಸ ಕಾಯ್ದೆಯಿಂದ ಆಸ್ಪತ್ರೆಗಳಿಗೆ ತೊಂದರೆಯಾಗುತ್ತದೆ. ಖಾಸಗಿ ಆಸ್ಪತ್ರೆಗಳಿಗೆ ತಮ್ಮದೇ ಆದ ನಿರ್ವಹಣಾ ವೆಚ್ಚ ಭರಿಸುವುದು ದುರ್ಭರವಾಗುತ್ತದೆ. ಹಾಗಾಗಿ ಖಾಸಗಿ ವೈದ್ಯಕೀಯ ವಿಧೇಯಕವನ್ನು ಜಾರಿಗೆ ತರಬಾರದು ಎಂದು ಖಾಸಗಿ ವೈದ್ಯರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.  ವೈದ್ಯರ ಮುಷ್ಕರದಿಂದಾಗಿ ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಸ್ಥಗಿತಗೊಂಡಿದ್ದು , ಹೊರ ರೋಗಿಗಳಿಗೆ ಇದರಿಂದ ತುಂಬ ತೊಂದರೆಯಾಗಿದೆ.

ಆಸ್ಪತ್ರೆಗಳ ಮುಂದೆ ಎಲ್ಲಿಯದಲ್ಲೆ ರೋಗಿಗಳು ಆಸ್ಪತೆಗಳ ಮುಂದೆ ಕುರಿತು ಚಿಕಿತ್ಸೆಗಾಗಿ ವೈದ್ಯರನ್ನು ಕಾಯುತ್ತಿದ್ದಾರೆ. ಬೆಂಗಳೂರು, ಮೈಸೂರು ಮುಂತಾದ ಮಹಾನಗರಗಳಲ್ಲಿ ವೈದ್ಯರು ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ.  ಬೆಂಗಳೂರು ನಗರ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ  ಉದ್ಯಾನದವರೆಗೆ ಸಾವಿರಾರು ವೈದ್ಯರು ಪ್ರತಿಭಟನಾ ಮೆರವಣಿಗೆ ನಡೆಸಿ ಖಾಸಗಿ ವೈದ್ಯಕೀಯ ವಿಧೇಯಕ ಜಾರಿಗೆ ತರಬಾರದು ಎಂದು ಆಗ್ರಹಿಸಿದರು.

ಮೈಸೂರಿನಲ್ಲಿಯೂ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಹೊರ ರೋಗಿಗಳ ತಪಾಸಣೆ ಸಂಪೂರ್ಣ ಸ್ಥಗಿತಗೊಂಡಿದ್ದು , ಅನೇಕರು ಸರ್ಕಾರಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ.

ಮನವಿ:

ಅಖಿಲ ಕರ್ನಾಟಕ ಖಾಸಗಿ ಆಸ್ಪತ್ರೆಗಳ ಸಂಘದ ಸದಸ್ಯರು ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ವಿಧೇಯಕ ಜಾರಿಗೆ ತರದಂತೆ ಮನವಿ ಸಲ್ಲಿಸಿದ್ದರು. ರಾಜ್ಯಾದ್ಯಂತ ಬಹುತೇಕ ಎಲ್ಲ ಖಾಸಗಿ ಆಸ್ಪತ್ರೆಗಳು ಇಂದು ಸ್ತಬ್ದಗೊಂಡಿವೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin