ತನ್ನ ಹೆಸರಿಗೆ ಆಸ್ತಿ ಬರೆದು ಕೊಡದ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಮಗ..!

ಈ ಸುದ್ದಿಯನ್ನು ಶೇರ್ ಮಾಡಿ

Hammer--00

ಚಿತ್ರದುರ್ಗ, ಜೂ.17- ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗನೇ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಹ್ಯೇಯ ಘಟನೆ ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬರುಜನಹಟ್ಟಿಯ ಶ್ರೀನಿವಾಸ್(75) ಕೊಲೆಯಾಗಿರುವ ತಂದೆ. ಆಸ್ತಿಯನ್ನು ತನ್ನ ಹೆಸರಿಗೆ ಬರೆಯಬೇಕೆಂದು ಮಗ ಬಸವರಾಜ(35) ತಂದೆಯೊಂದಿಗೆ ಸದಾ ಜಗಳವಾಡುತ್ತಿದ್ದ.  ಇದಕ್ಕೆ ಸಮ್ಮತಿಸದ ಹಿನ್ನೆಲೆಯಲ್ಲಿ ಬಸವರಾಜ ಸುತ್ತಿಗೆಯಿಂದ ಹೊಡೆದು ತಂದೆಯನ್ನು ಕೊಲೆ ಮಾಡಲಾಗಿದೆ ಎಂದು ಮನೆಯವರು ದೂರಿದ್ದಾರೆ. ಕೋಟೆ ಠಾಣೆ ಪೊಲೀಸರು ಬಸವರಾಜನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin