ಮೀಸಲಿಟ್ಟ ಹಣದಲ್ಲೇ ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್

ಈ ಸುದ್ದಿಯನ್ನು ಶೇರ್ ಮಾಡಿ

Siddaramaiah-01

ಬೆಂಗಳೂರು, ಜೂ.17- ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮೀಸಲಿಟ್ಟಿರುವ ಹಣದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೇವೆ ಒದಗಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.  ಬಿಎಂಟಿಸಿಯ ಸ್ಮಾರ್ಟ್‍ಕಾರ್ಡ್, ವಿವಿಧ ಮಾದರಿಯ ಹೊಸ ಬಸ್‍ಗಳನ್ನು ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, ಎಸ್ಸಿ-ಎಸ್ಟಿ ವರ್ಗದ ವಿದ್ಯಾರ್ಥಿಗಳಿಗೆ ಮೀಸಲಿಟ್ಟ ಹಣದಲ್ಲೇ ಉಚಿತ ಬಸ್ ಸೇವೆ ಕಲ್ಪಿಸಲಾಗಿದೆ. ಹಾಸ್ಟೆಲ್, ವಿದ್ಯಾರ್ಥಿವೇತನ ಸೇರಿದಂತೆ ನಾನಾ ಸೌಲಭ್ಯಗಳನ್ನು ಈ ಹಣದಲ್ಲೇ ನೀಡಲಾಗುತ್ತಿದೆ. ಹಣವನ್ನು ಬೇರೆ ವರ್ಗದವರಿಗೆ ನೀಡಲು ಸಾಧ್ಯವಿಲ್ಲ. ಸರ್ಕಾರ ವಿದ್ಯಾರ್ಥಿಗಳ ನಡುವೆ ತಾರತಮ್ಯ ಮಾಡುತ್ತಿಲ್ಲ ಎಂದರು.

ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ ಒದಗಿಸಬೇಕೆಂದು ಸಭಿಕರೊಬ್ಬರ ಪ್ರಶ್ನೆಗೆ ಉತ್ತಸಿದ ಅವರು, ಇತರೆ ವರ್ಗದ ವಿದ್ಯಾರ್ಥಿಗಳಿಗೂ ಕೂಡ ರಿಯಾಯ್ತಿ ದರದಲ್ಲಿ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಇದರಲ್ಲಿ ಯಾವುದೇ ರೀತಿಯ ಗೊಂದಲ ಬೇಡ ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin