ಮಂಗಳೂರಲ್ಲಿ ರಾಷ್ಟ್ರಪತಿಗೆ ಭವ್ಯ ಸ್ವಾಗತ, ಉಡುಪಿ ಕೃಷ್ಣನ ದರ್ಶನ ಪಡೆದ ಪ್ರಣಬ್ ಮುಖರ್ಜಿ

ಈ ಸುದ್ದಿಯನ್ನು ಶೇರ್ ಮಾಡಿ

Pranabಮ0ಗಳೂರು ಜೂ. 18.:- ಭಾರತದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಉಡುಪಿಗೆ ತೆರಳಲು ಭಾನುವಾರ ಮಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸಿದಾಗ ಭವ್ಯವಾಗಿ ಸ್ವಾಗತಿಸಲಾಯಿತು.  ಭಾನುವಾರ ಬೆಳಿಗ್ಗೆ ಭಾರತೀಯ ವಾಯುಪಡೆಯ ವಿಮಾನದಲ್ಲಿ ಆಗಮಿಸಿದ ರಾಷ್ಟ್ರಪತಿಯವರನ್ನು ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು. ಆಹಾರ ಸಚಿವ ಯು.ಟಿ.ಖಾದರ್, ಮೇಯರ್ ಕವಿತಾ ಸನಿಲ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್, ಪೊಲೀಸ್ ಕಮೀಷನರ್ ಟಿ.ಆರ್. ಸುರೇಶ್ ಅವರು ಈ ಸಂದರ್ಭದಲ್ಲಿದ್ದು, ರಾಷ್ಟ್ರಪತಿಗಳನ್ನು  ಸ್ವಾಗತ ನೀಡಿದರು.

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್ ಅವರು ರಾಷ್ಟ್ರಪತಿಗಳೊಂದಿಗೆ  ವಿಮಾನದಲ್ಲಿ ಆಗಮಿಸಿದರು. ರಾಷ್ಟ್ರಪತಿಗಳು ಬಳಿಕ ವಾಯುಪಡೆ ಹೆಲಿಕಾಪ್ಟರ್‍ನಲ್ಲಿ ಉಡುಪಿಗೆ ತೆರಳಿದರು. ರಾಷ್ಟ್ರಪತಿಗಳ ಆಗಮನದ ಹಿನ್ನೆಲೆಯಲ್ಲಿ ವಿಮಾನನಿಲ್ದಾಣದ ಸುತ್ತಮುತ್ತ ಹಾಗೂ ಮಂಗಳೂರಿನಿಂದ ವಿಮಾನನಿಲ್ದಾಣಕ್ಕೆ ತೆರಳುವ ರಸ್ತೆಯುದ್ದಕ್ಕೂ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

ಉಡುಪಿ ಶ್ರೀಕೃಷ್ಣನ ದರ್ಶನ

ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಇಂದು (ಭಾನುವಾರ) ಮಂಗಳೂರು ವಿಮಾನ ನಿಲ್ದಾಣದ ಮೂಲಕ ಉಡುಪಿಗೆ ತೆರಳಿ ಶ್ರೀಕೃಷ್ಣನ ದರ್ಶನ ಪಡೆದರು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ಸ್ವಾಗತಿಸಿದರು. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ ಜೆ ಜಾರ್ಜ್ ಪ್ರಣಬ್ ಮುಖರ್ಜಿ ಅವರಿಗೆ ಸಾಥ್ ನೀಡಿದರು.  ಮಂಗಳುರು ವಿಮಾನ ನಿಲ್ದಾಣದಲ್ಲಿ ಅರಣ್ಯ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಸಚಿವ ಯು.ಟಿ.ಖಾದರ್, ಮೇಯರ್ ಕವಿತಾ ಸನಿಲ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಜಿಲ್ಲಾಧಿಕಾರಿ ಡಾ.ಕೆ.ಜಿ. ಜಗದೀಶ್, ಪೊಲೀಸ್ ಕಮೀಷನರ್ ಟಿ.ಆರ್. ಸುರೇಶ್ ಸ್ವಾಗತಿಸಿದರು. ಮಂಗಳೂರು ವಿಮಾನ ನಿಲ್ದಾಣದಿಂದ ಐಎಎಫ್ ಹೆಲಿಕಾಪ್ಟರ್ ಮೂಲಕ ಉಡುಪಿಗೆ ತೆರಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin