ರಾಷ್ಟ್ರಪತಿ ಚುನಾವಣೆ : ಉದ್ಧವ್ ಠಾಕ್ರೆ-ಅಮಿತ್ ಷಾ ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

Amit-Shah

ನವದೆಹಲಿ, ಜೂ.18- ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆ ದಿನಕ್ಕೊಂದು ತಿರುವು ಪಡೆಯುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಇಂದು ಬೆಳಗ್ಗೆ ಮುಂಬೈನಲ್ಲಿ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿ ಒಮ್ಮತದ ಅಭ್ಯರ್ಥಿ ಆಯ್ಕೆ ಕುರಿತು ಮಹತ್ವದ ಸಮಾಲೋಚನೆ ನಡೆಸಿದರು.  ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಮುಂಬೈನಲ್ಲಿರುವ ಶಿವಸೇನೆ ಪರಮೋಚ್ಚ ನಾಯಕ ಬಾಳ್‍ಠಾಕ್ರೆ ಅವರ ಅಧಿಕೃತ ನಿವಾಸ ಮಾತೋಶ್ರೀಗೆ ತೆರಳಿ ಉದ್ಧವ್ ಅವರನ್ನು ಭೇಟಿ ಮಾಡಿ ಚರ್ಚಿಸಿದರು.

ಬೆಳಗ್ಗೆ 10 ಗಂಟೆಯಿಂದ ಸುಮಾರು 75 ನಿಮಿಷಗಳ ಕಾಲ ಉದ್ಧವ್ ಮತ್ತು ಅಮಿತ್ ಷಾ ನಡುವೆ ಗೌಪ್ಯ ಮಾತುಕತೆ ನಡೆಯಿತು ಎಂದು ಮೂಲಗಳು ತಿಳಿಸಿವೆ.   ಭಾರತದ ಹಸಿರು ಕ್ರಾಂತಿ ಪಿತಾಮಹಾ ಎಂ.ಎಸ್.ಸ್ವಾಮಿನಾಥನ್ ಅವರನ್ನು ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯನ್ನಾಗಿ ಮಾಡಬೇಕೆಂಬುದು ಶಿವಸೇನೆಯ ಬೇಡಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಇವರ ಭೇಟಿ ಭಾ ರೀ ಪ್ರಾಮುಖ್ಯತೆ ಪಡೆದುಕೊಂಡಿದೆ.  ಬಿಜೆಪಿಗೆ ಶಿವಸೇನೆ ಬೆಂಬಲ ತೀರಾ ಅಗತ್ಯವಾಗಿದ್ದು, ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆಯಲ್ಲಿ ಒಮ್ಮತ ಮೂಡಿಸುವ ಪ್ರಯತ್ನವಾಗಿ ಅಮಿತ್ ಷಾ ಉದ್ಧವ್ ಠಾಕ್ರೆಯನ್ನು ಭೇಟಿ ಮಾಡಿದ್ದರು ಎಂದು ಮೂಲಗಳು ಹೇಳಿವೆ.

ಕೇಂದ್ರ ಸಚಿವರಾದ ರಾಜನಾಥ್ ಸಿಂಗ್ ಮತ್ತು ಎಂ. ವೆಂಕಯ್ಯ ನಾಯ್ಡು ಅವರು ಶುಕ್ರವಾರ ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಒಮ್ಮತದ ಅಭ್ಯರ್ಥಿ ಆಯ್ಕೆ ಕುರಿತು ಮಹತ್ವದ ಸಮಾಲೋಚನೆ ನಡೆಸಿದ್ದರು. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಉತ್ತರಾಧಿಕಾರಿಗಾಗಿ ಒಮ್ಮತದ ಅಭ್ಯರ್ಥಿ ಆಯ್ಕೆಗಾಗಿ ತೀವ್ರ ಕಸರತ್ತು ಮುಂದುವರಿಸಿರುವ ಬಿಜೆಪಿ ಸಮಿತಿಯೊಂದನ್ನು ರಚಿಸಿದ್ದು, ಪ್ರಾದೇಶಿಕ ಪಕ್ಷಗಳ ಮನವೊಲಿಕೆ ಯತ್ನ ಮುಂದುವರಿದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin