ಹೊನ್ನಾಳಿ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಈ ಸುದ್ದಿಯನ್ನು ಶೇರ್ ಮಾಡಿ

ದಾವಣಗೆರೆ, ಜೂ.19- ರೈತರ ಸಾಲಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಾವಣಗೆರೆ ಜಿಲ್ಲೆ ಹೊನ್ನಾಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.  ಇಂದು ಬೆಳಗ್ಗೆ ಮಾಜಿ ಸಚಿವ ರೇಣುಕಾಚಾರ್ಯ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.  ಅಂಗಡಿ, ಮುಂಗಟ್ಟುಗಳು ಬಂದ್ ಆಗಿದ್ದವು. ಆದರೆ, ಸಂಚಾರ ಯಥಾಸ್ಥಿತಿಯಲ್ಲಿದ್ದು, ಬಂದ್‍ಗೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯ ಸರ್ಕಾರ ರೈತರ ಸಾಲವನ್ನು ಮನ್ನಾ ಮಾಡಬೇಕು ಎಂದು ಘೋಷಣೆ ಕೂಗುತ್ತಾ ಪ್ರಮುಖ ವೃತ್ತದಲ್ಲಿ ಮೆರವಣಿಗೆ ನಡೆಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin