ಆರ್‍ಟಿಇ ಮಕ್ಕಳನ್ನುಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿದ ಬ್ರಿಗೇಡ್ ಶಾಲೆ ವಿರುದ್ಧ ಪೋಷಕರ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

RTE-01

ಬೆಂಗಳೂರು,ಜೂ.21- ನಗರದ ಜೆಪಿ ನಗರದಲ್ಲಿರುವ ಬ್ರಿಗೆಡ್ ಶಾಲೆಯಲ್ಲಿ ಆರ್‍ಟಿಇ ಅಡಿ ದಾಖಲಾಗಿರುವ ಮಕ್ಕಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪಾಠ-ಪ್ರವಚನ ನಡೆಸುತ್ತಿರುವುದನ್ನು ಕಂಡು ಪೋಷಕರು ಶಾಲೆಯ ವಿರುದ್ದ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಜೆಪಿನಗರದ ಈ ಶಾಲೆಯಲ್ಲಿ ಆರ್‍ಟಿಇ ಮುಖಾಂತರ ಪ್ರವೇಶ ಪಡೆದಿರುವ ಪುಟ್ಟ ಮಕ್ಕಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪಾಠ ಮಾಡುತ್ತಿರುವುದು ಇಂದು ಬಹಿರಂಗವಾಗಿದೆ. ಈ ಬಗ್ಗೆ ಪೋಷಕರು ಆಡಳಿತ ಮಂಡಳಿಯನ್ನು ಪ್ರಶ್ನಿಸಲಾಗಿ, ಪ್ರಾಂಶುಪಾಲರು ಹಾಗೂ ಶಿಕ್ಷಕರು ಈ ಆರೋಪವನ್ನು ತಳ್ಳಿ ಹಾಕಿದ್ದಾರೆ. ಇಂದು ಬೆಳಗ್ಗೆ ಮಕ್ಕಳನ್ನು ಪೋಷಕರು ಶಾಲೆಗೆ ಬಿಡಲು ಬಂದಿದ್ದಾಗ ಈ ವಿಚಾರ ಬೆಳಕಿಗೆ ಬಂದಿದೆ. ಏನೂ ಅರಿಯದ ಪುಟ್ಟ ಮಕ್ಕಳಲ್ಲೂ ಬೇಧಭಾವ ತೋರುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಆರ್‍ಟಿಇ ಅಡಿ ದಾಖಲಾಗಿರುವ ಮಕ್ಕಳನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಪೋಷಕರು ಶಾಲೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೂರು ನೀಡಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin