ಕಾಶ್ಮೀರದ ಸೊಪೋರ್‍ನಲ್ಲಿ ಭಾರತೀಯ ಸೇನೆ ಎನ್‍ಕೌಂಟರ್ ಗೆ ಇಬ್ಬರು ಉಗ್ರರು ಫಿನಿಶ್

ಈ ಸುದ್ದಿಯನ್ನು ಶೇರ್ ಮಾಡಿ

Encounter

ಸೋಪೋರ್,ಜೂ.21- ಜಮ್ಮು ಮತ್ತು ಕಾಶ್ಮೀರದ ಸೊಪೋರ್‍ನಲ್ಲಿ ಭಾರತೀಯ ಸೇನೆ ಎನ್‍ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ಸಾವಿಗೀಡಾದ ಉಗ್ರರು ಝೈಂಗೀರï ಪ್ರದೇಶದವರು ಎನ್ನಲಾಗಿದ್ದು ಉಗ್ರರಿಂದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನು ಘಟನೆಯಲ್ಲಿ ಅದೃಷ್ಟಾವಶಾತï ಭಾರತೀಯ ಸೈನಿಕರಿಗೆ ಯಾವುದೇ ಗಾಯಗಳಾಗಿಲ್ಲ. ಸೋಪೋರ್ ಜಿಲ್ಲೆಯ ಪಝಲ್ಪೊರ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ತಿಳಿದುಬಂದ ಹಿನ್ನಲೆಯಲ್ಲಿ ವಿಶೇಷ ಕಾರ್ಯಾಚರಣೆ ಪಡೆ ಹಾಗೂ 22 ಆರ್‍ಆರ್ ಸೇನಾ ಪಡೆ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.
ಕಾರ್ಯಾಚರಣೆ ಆರಂಭವಾಗುತ್ತಿದ್ದಂತೆಯೇ ಉಗ್ರರು ಸೇನಾ ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ ಯೋಧರು ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ.

ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಉಗ್ರರು ಬಳಿಸಿದ್ದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ಸಾಮಾಗ್ರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ಎಂದು ವರದಿಗಳು ತಿಳಿಸಿವೆ. ಈ ಘಟನೆಗೂ ಮೊದಲು ಟ್ರಾಲï ಭಾಗದಲ್ಲಿ ಸಿಆರ್‍ಪಿಎಫ್‍ನ 180ನೇ ಬೆಟಾಲಿಯನ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin